ADVERTISEMENT

ಕೊಪ್ಪ: ಕಂದು ಬಣ್ಣದಿಂದ ಕೂಡಿದ ಕುಡಿಯುವ ನೀರು ಪೂರೈಕೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2023, 14:50 IST
Last Updated 1 ಜುಲೈ 2023, 14:50 IST
ಕೊಪ್ಪ ಪಟ್ಟಣ ಪಂಚಾಯಿತಿ ವತಿಯಿಂದ ಪೂರೈಕೆಯಾದ ಕುಡಿಯುವ ನೀರು
ಕೊಪ್ಪ ಪಟ್ಟಣ ಪಂಚಾಯಿತಿ ವತಿಯಿಂದ ಪೂರೈಕೆಯಾದ ಕುಡಿಯುವ ನೀರು   

ಕೊಪ್ಪ: ಪಟ್ಟಣಕ್ಕೆ ಪೂರೈಕೆಯಾಗುತ್ತಿರುವ ಕುಡಿಯುವ ನೀರು ಕಂದು ಬಣ್ಣದಿಂದ ಕೂಡಿದ್ದು, ರೋಗ ಹರಡುವ ಭೀತಿ ಎದುರಾಗಿದೆ ಎಂಬ ದೂರು ಕೇಳಿ ಬಂದಿದೆ.

ಪಟ್ಟಣ ಪಂಚಾಯಿತಿ ವತಿಯಿಂದ ನಿತ್ಯ ಕುಡಿಯುವ ನೀರನ್ನು ಪಟ್ಟಣದ ಜನರಿಗೆ ಪೂರೈಸಲಾಗುತ್ತಿದೆ. ಆದರೆ, ಹಲವು ದಿನಗಳಿಂದ ನೀರು ಕಂದು ಬಣ್ಣದಿಂದ ಕೂಡಿದ್ದು, ಸಂಬಂಧಪಟ್ಟ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಲಾಗಿದೆ.

‘ಹಲವು ದಿನಗಳಿಂದ ಕುಡಿಯಲು ಯೋಗ್ಯವಲ್ಲದ ನೀರು ಪೂರೈಕೆಯಾಗುತ್ತಿದೆ. ಸಂಬಂಧಿಸಿದ ವಾಟರ್ ಮ್ಯಾನ್‌ಗೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ, ವಾರ್ಡ್‌ನ ಸದಸ್ಯರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು 8ನೇ ವಾರ್ಡ್‌ನ ವಿವೇಕಾನಂದ ರಸ್ತೆ ನಿವಾಸಿ ಸಿ.ಕೆ.ಮಾಲತಿ ತಿಳಿಸಿದ್ದಾರೆ.

ADVERTISEMENT

ಈ ಬಗ್ಗೆ ಪ್ರತಿಕ್ರಿಯೆಗಾಗಿ ಮುಖ್ಯಾಧಿಕಾರಿ ರಾಜಶೇಖರ್ ಅವರಿಗೆ ದೂರವಾಣಿ ಕರೆ ಮಾಡಲಾಯಿತಾದರೂ ಅವರು ಕರೆ ಸಂಪರ್ಕ ಸಾಧ್ಯವಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.