ಕೊಪ್ಪ: ಹರಿಹರಪುರ ರಸ್ತೆಯ ಬಂಟರ ಭವನದಲ್ಲಿ ಅ. 28ಕ್ಕೆ ಅಮ್ಮ ಫೌಂಡೇಷನ್ ವತಿಯಿಂದ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಸುಧಾಕರ ಎಸ್.ಶೆಟ್ಟಿ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಮೆರಿಕದ ಆಪಲ್ ಕಂಪನಿಯು ಭಾರತರ ಟಾಟಾ ಎಲೆಕ್ಟ್ರಾನಿಕ್ಸ್ ಜತೆಯಲ್ಲಿ ಒಪ್ಪಂದ ಮಾಡಿಕೊಂಡಿದ್ದು, ಬೆಂಗಳೂರು ಸಮೀಪದ ಹೊಸೂರಿನಲ್ಲಿ ಘಟಕ ತೆರೆಯುತ್ತಿದೆ. 20 ಸಾವಿರ ಮಹಿಳೆಯರಿಗೆ ಉದ್ಯೋಗ ಅವಕಾಶ ಸಿಗಲಿದೆ. ಟಾಟಾ ಕಂಪನಿಯ ಜತೆಯಲ್ಲಿ ಅಮ್ಮ ಫೌಂಡೇಷನ್ ನೋಡಲ್ ಏಜೆನ್ಸಿಯಾಗಿ ಕೆಲಸ ಮಾಡಲಿದೆ. ಈ ಮೂಲಕ ಶೃಂಗೇರಿ ಕ್ಷೇತ್ರದ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವಲ್ಲಿ ಶ್ರಮ ಹಾಕಲಾಗುತ್ತಿದೆ’ ಎಂದರು.
ಎಸ್.ಎಸ್.ಎಲ್.ಸಿ ಉತ್ತೀರ್ಣ ಅಥವಾ ಅನುತ್ತೀರ್ಣ, ಐಟಿಐ, ಪಿಯುಸಿ, ಡಿಪ್ಲೊಮೊ ಮಾಡಿದ 34 ವರ್ಷದ ಒಳಗಿನವರು ಮಾತ್ರ ಮೇಳದಲ್ಲಿ ಭಾಗವಹಿಸಲು ಅವಕಾಶವಿದೆ. ಊಟ, ವಸತಿ ಉಚಿತವಾಗಿ ನೀಡಲಾಗುವುದು. ಕ್ಷೇತ್ರದ ಮೂರು ತಾಲ್ಲೂಕಿನ ಪ್ರತಿ ಹೋಬಳಿಯಿಂದ ಕನಿಷ್ಠ 100 ಮಹಿಳೆಯರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಇರಾದೆ ಹೊಂದಿದ್ದೇನೆ. ಮಲೆನಾಡಿನ ಮಹಿಳೆಯರು ಸ್ವಾವಲಂಬಿಗಳಾಗಬೇಕು ಎಂದು ಅವರು ಹೇಳಿದರು.
ಟಾಟಾ ಕಂಪನಿಯ ಶ್ರೀಧರ್, ಹಾಸನದ ಕಿರಣ್, ಎಫ್.ಕೆ.ಸಿ.ಸಿಯ ಪ್ರಮುಖರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.