ಕೊಪ್ಪ: ತಾಲ್ಲೂಕಿನ ಗುಣವಂತೆ ಗ್ರಾಮದ ಗಂಗನಸರಳು ಭಾಗದಲ್ಲಿ ಕಾಡಾನೆಯೊಂದು ಬುಧವಾರ ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ತೀರ್ಥಹಳ್ಳಿ ತಾಲ್ಲೂಕಿನ ಶೇಡ್ಗಾರ್ ಕಡೆಯಿಂದ ಸಿದ್ದರಮಠ ಭಾಗಕ್ಕೆ ಬಂದಿದ್ದು, ರೈತರ ಜಮೀನಿನಲ್ಲಿ ಮಂಗಳವಾರ ಓಡಾಡಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿಕೊಟ್ಟಿದ್ದರು. 10ವರ್ಷ ಪ್ರಾಯದ ಆನೆ ಎಂದು ಅಂದಾಜಿಸಲಾಗಿದೆ.
ಮಲೆನಾಡಿನ ಭಾಗದಲ್ಲಿ ಆನೆಗಳ ಹಾವಳಿ ಹೆಚ್ಚಾಗಿದೆ. ಅರಣ್ಯ ಸಚಿವರು, ಕ್ಷೇತ್ರದ ಶಾಸಕರು ಈ ಬಗ್ಗೆ ಗಮನ ಹರಿಸಿ ಅವುಗಳ ಸ್ಥಳಾಂತರಕ್ಕೆ ಕ್ರಮ ವಹಿಸಬೇಕು ಎಂದು ಮುಖಂಡ ಯು.ಸಿ.ಚೇತನ್ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.