ಕೊಪ್ಪ: ‘ಸಂವಿಧಾನಕ್ಕೆ ವಿರುದ್ಧವಾಗಿ ವಕ್ಫ್ ಕಾಯ್ದೆ ತಿದ್ದುಪಡಿಗೆ ಕೇಂದ್ರ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಮುಸ್ಲಿಂ ಸಂಯುಕ್ತ ಜಮಾಅತ್ ಒಕ್ಕೂಟ ವತಿಯಿಂದ ಜೂನ್ 11ರಂದು ಬೆಳಿಗ್ಗೆ 9 ಗಂಟೆಗೆ ಪಟ್ಟಣದಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ’ ಎಂದು ಮುಸ್ಲಿಂ ಸಂಯುಕ್ತ ಒಕ್ಕೂಟದ ಅಧ್ಯಕ್ಷ ಸೈಯದ್ ಏಜಾಸ್ ಅಹಮ್ಮದ್ ತಿಳಿಸಿದ್ದಾರೆ.
‘ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದ ಪಕ್ಕದ ಮೊಹಿಯುದ್ದೀನ್ ಜುಮಾ ಮಸೀದಿಯಿಂದ ಪ್ರತಿಭಟನಾ ಮೌನ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಪಟ್ಟಣದ ಮುಖ್ಯರಸ್ತೆಯ ಮೂಲಕ ಸಾಗುವ ಮೆರವಣಿಗೆಯು ಪುರಭವನದವರೆಗೆ ನಡೆಯಲಿದೆ. ಅಲ್ಲಿ ಬಹಿರಂಗ ಸಭೆ ನಡೆಯಲಿದೆ’ ಎಂದು ತಿಳಿಸಿದ್ದಾರೆ.
‘ಉದ್ಘಾಟನೆ ಕಾರ್ಯಕ್ರಮದಲ್ಲಿ ಮೊಹಿಯುದ್ದೀನ್ ಶಾಫಿ ಜುಮಾ ಮಸೀದಿಯ ಖತೀಬ ಹನೀಫ್ ಖಾಸಿಮಿಯ, ಜಾಮಿಯ ಮಸೀದಿಯ ಖತೀಬ, ಅಬ್ದುಲ್ ಕಲೀಲ್ ಸಾಹೇಬ್, ರಾಘವೇಂದ್ರ ನಗರದ ನೂರುಲ್ ಆಲಂ ಜುಮಾ ಮಸೀದಿಯ ಖತೀಬ ಸದ್ದಾಂ ಹುಸೇನ್ ಫೈಝಿ ಅಲ್‌ಬುರ್ಹಾನಿ ಪಾಲ್ಗೊಳ್ಳಲಿದ್ದಾರೆ’ ಎಂದರು.
ಕರ್ನಾಟಕ ಉಲೇಮ ಒಕ್ಕೂಟದ ಕಾರ್ಯದರ್ಶಿ ಅಬ್ದುಲ್ ಅಝೀಜ್ ಧಾರಿಮಿ, ವಕೀಲರಾದ ಸುಧೀರ್ ಕುಮಾರ್ ಮುರೊಳ್ಳಿ, ಜೀಷಾನ್ ಅಲಿ ಸುರತ್ಕಲ್, ಚಿಕ್ಕಮಗಳೂರು ಜಿಲ್ಲೆಯ ವಕ್ಫ್ ಬೋರ್ಡ್ ಅಧ್ಯಕ್ಷ ಮೊಹಮ್ಮದ್ ಶಾಹಿದ್ ರಿಜ್ವಿ, ಜಾಮಿಯ ಮಸೀದಿ ಅಧ್ಯಕ್ಷ ಜಹೂರ್ ಹುಸೇನ್, ತಾಲ್ಲೂಕಿನ ಮಸೀದಿಗಳ ಅಧ್ಯಕ್ಷರು, ಸದಸ್ಯರು, ಮುಸ್ಲಿಂ ಸಂಯುಕ್ತ ಜಮಾಅತ್ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.