ADVERTISEMENT

ಬಣಕಲ್ ವಿದ್ಯಾಭಾರತಿ ಶಾಲೆಯಲ್ಲಿ ಪೋಷಕರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2022, 5:20 IST
Last Updated 6 ಡಿಸೆಂಬರ್ 2022, 5:20 IST
ಬಣಕಲ್ ವಿದ್ಯಾಭಾರತಿ ಶಾಲೆಯಲ್ಲಿ ಪೋಷಕರ ದಿನಾಚರಣೆ ಅಂಗವಾಗಿ ಪೋಷಕರಿಗೆ ವಿವಿಧ ಸ್ಪರ್ಧೆಗಳು ನಡೆದವು
ಬಣಕಲ್ ವಿದ್ಯಾಭಾರತಿ ಶಾಲೆಯಲ್ಲಿ ಪೋಷಕರ ದಿನಾಚರಣೆ ಅಂಗವಾಗಿ ಪೋಷಕರಿಗೆ ವಿವಿಧ ಸ್ಪರ್ಧೆಗಳು ನಡೆದವು   

ಕೊಟ್ಟಿಗೆಹಾರ: ‘ಮಕ್ಕಳಲ್ಲಿ ಕಲಿಕಾ ಆಸಕ್ತಿ ಬೆಳೆಸುವಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ’ ಎಂದು ವಿದ್ಯಾಭಾರತಿ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಬಿ.ಶಿವರಾಮ ಶೆಟ್ಟಿ ಹೇಳಿದರು.

ಶಾಲೆಯ 36ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಪೋಷಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಬಣಕಲ್ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಟಿ.ಎಂ. ಗಜೇಂದ್ರ ಮಾತನಾಡಿದರು. ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ADVERTISEMENT

ಸಮಾಜ ಸೇವಕ ಬಿ.ಆರ್. ವಿಜಯ ಕುಮಾರ್, ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಬಿ.ಇ.ಸುಬ್ರಾಯಗೌಡ. ಕಾರ್ಯದರ್ಶಿ ಲಿಂಗಪ್ಪ .ಬಿ.ಪಿ. ಕೋಶಾಧ್ಯಕ್ಷ ಯು.ಪಿ.ರಾಮಚಂದ್ರ ಹೊಳ್ಳ. ಮುಖ್ಯ ಶಿಕ್ಷಕ ಟಿ.ಆರ್. ಮಾಲತಿ, ಸಿ. ನಾಗರಾಜು, ವಸಂತ್ ಹಾರ್ಗೋಡು. ಭಕ್ತೇಶ್, ಮನಮೋಹನ್, ಶೇಖರಪ್ಪ, ಲಿಂಗರಾಜು, ಲೋಕೇಶ್, ಪ್ರತಾಪ್, ಲೀಲಾಮಣಿ, ಕಮಲಮ್ಮ, ಶ್ವೇತಾ, ಪದ್ಮಶ್ರೀ, ಅಶ್ವಿತಾ, ರಂಜಿತಾ, ಅನುಷಾ, ಆಶಾ, ಧನುಶ್ರೀ, ಪೋಷಕರಾದ ರಾಜೇಶ್, ಸುಧಾ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.