ಚಿಕ್ಕಮಗಳೂರು: ಬಾಳೆಹೊನ್ನೂರು ಸಮೀಪದ ಮುದುಗುಣಿ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಎನ್.ಆರ್.ಪುರದಿಂದ ಚಿಕ್ಕಮಗಳೂರು ಮಾರ್ಗವಾಗಿ ಮೈಸೂರಿಗೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮರ ಮುರಿದು ಬಸ್ ಮೇಲೆಯೇ ಬಿದ್ದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.