ADVERTISEMENT

ಚಿಕ್ಕಮಗಳೂರು | ಬಸ್‌ಗೆ ಆಕಸ್ಮಿಕ ಬೆಂಕಿ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2026, 5:52 IST
Last Updated 4 ಮಾರ್ಚ್ 2026, 5:52 IST
ಬಸ್‌ಗೆ ಹೊತ್ತಿದ್ದ ಬೆಂಕಿ ನಂದಿಸುತ್ತಿರುವ ಅಗ್ನಿ ಶಾಮಕ ಸಿಬ್ಬಂದಿ
ಬಸ್‌ಗೆ ಹೊತ್ತಿದ್ದ ಬೆಂಕಿ ನಂದಿಸುತ್ತಿರುವ ಅಗ್ನಿ ಶಾಮಕ ಸಿಬ್ಬಂದಿ   

ಚಿಕ್ಕಮಗಳೂರು: ಆಕಸ್ಮಿಕವಾಗಿ ಕೆಎಸ್‌ಆರ್‌ಟಿಸಿ ಬಸ್‌ಗೆ ಬೆಂಕಿ ತಗುಲಿದ್ದು, ಚಾಲಕ ಮತ್ತು ನಿರ್ವಾಹಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ.

ನಗರದ ಬೇಲೂರು ರಸ್ತೆಯ ಜೂನಿಯರ್ ಕಾಲೇಜು ಮುಂಭಾಗ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಚಾಲಕ ಮತ್ತು ನಿರ್ವಾಹಕ ಕೂಡಲೇ ಎಲ್ಲ ಪ್ರಯಾಣಿಕರನ್ನು ಇಳಿಸಿದರು. ಮಾಹಿತಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಿದರು.

ಹೊಗೆಯ ನಡುವೆ ಪ್ರಯಾಣಿಕರನ್ನು ಇಳಿಸುವಾಗ ಬಸ್ ಚಾಲಕ ದಿಲೀಪ್ ಅವರ ಕೈಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.