ADVERTISEMENT

ಚಿಕ್ಕಮಗಳೂರು: ಆರು ಡಿಪೊಗಳ 560 ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2025, 6:12 IST
Last Updated 5 ಆಗಸ್ಟ್ 2025, 6:12 IST
   

ಚಿಕ್ಕಮಗಳೂರು: ಕೆಎಸ್ಆರ್‌ಟಿಸಿ ನೌಕರರ ಮುಷ್ಕರದಿಂದ ಬಸ್ ಇಲ್ಲವಾಗಿದ್ದು, ಖಾಸಗಿ ಬಸ್‌ಗಳಲ್ಲಿ ಜನ ಪ್ರಯಾಣ ಮಾಡುತ್ತಿದ್ದಾರೆ.

ಚಿಕ್ಕಮಗಳೂರು ಡಿಪೊದಲ್ಲೇ 150ಕ್ಕೂ ಹೆಚ್ಚು ಬಸ್‌ಗಳು ನಿಂತಿವೆ. ಜಿಲ್ಲೆಯ ಆರು ಡಿಪೊಗಳ 560 ಬಸ್‌ಗಳು ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.

ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್‌ಗಳನ್ನು ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ. ಅವುಗಳನ್ನು ಶಿವಮೊಗ್ಗ, ಬೆಂಗಳೂರು, ಮೈಸೂರು ಸೇರಿ ದೂರದ ಊರುಗಳಿಗೆ ಅಧಿಕಾರಿಗಳು ಕಳುಹಿಸುತ್ತಿದ್ದಾರೆ.

ADVERTISEMENT

ಇನ್ನೂ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ನಿಲ್ದಾಣದಲ್ಲಿದ್ದು, ಬಸ್‌ಗಳಿಗಾಗಿ ಕಾದಿದ್ದಾರೆ. ಹಳ್ಳಿಗಳಿಗೆ ಖಾಸಗಿ ಬಸ್‌ ಕೂಡ ಇಲ್ಲವಾಗಿದ್ದು, ಗ್ರಾಮೀಣ ಪ್ರದೇಶದ ಪ್ರಯಾಣಿಕರಿಗೆ ತೊಂದರೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.