ADVERTISEMENT

ಚಿಕ್ಕಮಗಳೂರು: ಕೆಎಸ್‌ಆರ್‌ಟಿಸಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ನಿರ್ಧಾರ

ಪರ್ಯಾಯವಾಗಿ ಖಾಸಗಿ ಬಸ್‌, ಮ್ಯಾಕ್ಸಿ ಕ್ಯಾಬ್‌ ವ್ಯವಸ್ಥೆ: ಡಿ.ಸಿ.

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 14:14 IST
Last Updated 6 ಏಪ್ರಿಲ್ 2021, 14:14 IST

ಚಿಕ್ಕಮಗಳೂರು: ಕೆಎಸ್‌ಆರ್‌ಟಿಸಿ ನೌಕರರು ಇದೇ 7ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿರುವ ನಿಮಿತ್ತ ಜಿಲ್ಲೆಯ ಎಲ್ಲ ತಾಲ್ಲೂಕಿನ ಕೆಎಸ್‌ಆರ್‌ಟಿಸಿನಿಲ್ದಾಣಗಳಿಂದ ಪ್ರಯಾಣಿಕರಿಗೆ ಸಂಚಾರಕ್ಕೆ ಖಾಸಗಿ ಬಸ್, ಮ್ಯಾಕ್ಸಿ ಕ್ಯಾಬ್‍ಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ತಿಳಿಸಿದರು.

ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ತುರ್ತು ಸಭೆಯಲ್ಲಿ ಮಾತನಾಡಿದರು.

ಸಾರ್ವಜನಿಕರು ಹಿತದೃಷ್ಟಿಯಿಂದ ಈ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.ಜಿಲ್ಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮದ ಕಾರ್ಯಾಚರಣೆ ಮಾರ್ಗಗಳಲ್ಲಿ ಖಾಸಗಿ ಬಸ್‌ಗಳು, ಕ್ಯಾಬ್‌ಗಳನ್ನು ಓಡಿಸಲು ಕ್ರಮ ವಹಿಸಲಾಗಿದೆ. ಬುಧವಾರ ಬೆಳಿಗ್ಗೆಯಿಂದಲೇ ವಾಹನಗಳು ನಿಲ್ದಾಣಗಳಿಂದ ಸಂಚರಿಸಲಿವೆ. ಸಾರಿಗೆ ಸಂಸ್ಥೆಯ ಟಿಕೆಟ್‌ ದರದಲ್ಲಿಯೇ ಪ್ರಯಾಣಿಕರನ್ನು ಕರೆದೊಯ್ಯಲು ಕಟ್ಟುನಿಟ್ಟಿನ ಕ್ರಮವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ಪ್ರಯಾಣಿಕರಿಂದ ದೂರುಗಳು ಬಾರದಂತೆ ಕಾರ್ಯನಿರ್ವಹಿಸಬೇಕು ಎಂದು ಖಾಸಗಿ ಬಸ್ ಮಾಲೀಕರಿಗೆ ತಿಳಿಸಿದರು.

ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಾದ್ಯಂತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್.ಎಂ.ಹಾಕೆ ತಿಳಿಸಿದರು.

ದೂರುಗಳಿದ್ದಲ್ಲಿ ದೂರವಾಣಿ ಸಂಖ್ಯೆ: 7760990407, 08262-229869, 9480805100,08262-230540 ಸಂಪರ್ಕಿಸಬಹುದು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಶಿರೋಳ್ಕರ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಎಚ್‌.ಟಿ.ವಿರೇಶ್, ಖಾಸಗಿ ಬಸ್ ಮಾಲೀಕರ ಸಂಘದ ಪದಾಧಿಕಾರಿಗಳು, ಮ್ಯಾಕ್ಸಿ ಕ್ಯಾಬ್ ಸಂಘದ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.