
ಪ್ರಜಾವಾಣಿ ವಾರ್ತೆ
ಬಸ್ ಪಲ್ಟಿಯಾಗಿರುವ ದೃಶ್ಯ
ಚಿಕ್ಕಮಗಳೂರು: ಕುದುರೆಮುಖ ಚಾರಣ ಹೋಗಲು ಪ್ರವಾಸಿಗರು ತೆರಳುತ್ತಿದ್ದ ಖಾಸಗಿ ಬಸ್ ಕಳಸ ಸಮೀಪದ ಕಂಚಿಗಾನೆ ತಿರುವಿನಲ್ಲಿ ಶನಿವಾರ ಬೆಳಿಗ್ಗೆ 5.30ರ ಸುಮಾರಿನಲ್ಲಿ ಪಲ್ಟಿಯಾಗಿದೆ.
ಬಸ್‌ನಲ್ಲಿ 48 ಜನ ಪ್ರಯಾಣ ಮಾಡುತ್ತಿದ್ದರು. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, 14 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರನ್ನು ಕಳಸ ಪಟ್ಟಣದ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.