
ಪ್ರಜಾವಾಣಿ ವಾರ್ತೆ
ತರೀಕೆರೆ: ಲಿಂಗದಹಳ್ಳಿಯ ಸಹ್ಯಾದ್ರಿಪುರದ ಬಳಿ ಬುಧವಾರ ಬೆಳಗಿನ ಜಾವ 3 ವರ್ಷ ಪ್ರಾಯದ ಹೆಣ್ಣು ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.
ಬೋನಿಗೆ ಬಿದ್ದ ಚಿರತೆಯನ್ನು ಭದ್ರಾ ವನ್ಯಜೀವಿ ವಿಭಾಗದ ಕಾಡಿಗೆ ಬಿಡಲಾಗಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ತಿಳಿಸಿವೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಉಮ್ಮರ್‌ಬಾದ್‌ಷಾ, ವಲಯ ಅರಣ್ಯಾಧಿಕಾರಿ ಆಸಿಫ್ ಅಹಮದ್ ಸ್ಥಳಕ್ಕೆ ಭೇಟಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.