ಆಲ್ದೂರು: 2024 –25ನೇ ಸಾಲಿನಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಅಂಚೆ ಜೀವವಿಮೆ ಮಾಡಿಸಿದ್ದಕ್ಕಾಗಿ ಮತ್ತು ಪಿಎಲ್‌ಐ ವಿಭಾಗದಲ್ಲಿಯ ಉತ್ತಮ ಸಾಧನೆ ಮಾಡಿದ್ದಕ್ಕೆ ಪಟ್ಟಣದ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಲೋಹಿತ್ ಅವರಿಗೆ ಪ್ರಶಸ್ತಿ ದೊರೆತಿದೆ.
ಮೈಸೂರಿನಲ್ಲಿ ಈಚೆಗೆ ಆಯೋಜಿಸಿದ್ದ ಉನ್ನತಿ ಎಕ್ಸಲೆನ್ಸ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ‘ಅಂಚೆ ಕಚೇರಿಯ ಸಿಬ್ಬಂದಿ ಸಹಕಾರದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ.
ಸರ್ಕಾರದ ಯೋಜನೆ ಜನರಿಗೆ ತಲುಪಿಸುವುದು ನಮ್ಮ ಕರ್ತವ್ಯವಾಗಿದೆ’ ಎಂದು ಲೋಹಿತ್ ಪ್ರತಿಕ್ರಿಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.