ADVERTISEMENT

ಲೋಕಾಯುಕ್ತಕ್ಕೆ ದೂರು: ಶಾಸಕ ರಾಜೇಗೌಡ ಆಸ್ತಿ ಮೌಲ್ಯಮಾಪನ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 7:11 IST
Last Updated 11 ಫೆಬ್ರುವರಿ 2026, 7:11 IST
<div class="paragraphs"><p>ಕರ್ನಾಟಕ ಲೋಕಾಯುಕ್ತ</p></div>

ಕರ್ನಾಟಕ ಲೋಕಾಯುಕ್ತ

   

– ಪ್ರಜಾವಾಣಿ ಚಿತ್ರ

ಬಾಳೆಹೊನ್ನೂರು (ಚಿಕ್ಕಮಗಳೂರು): ಲೋಕಾಯುಕ್ತಕ್ಕೆ ವ್ಯಕ್ತಿಯೊಬ್ಬರು ನೀಡಿದ ದೂರು ಆಧರಿಸಿ ಶಾಸಕ ಟಿ.ಡಿ.ರಾಜೇಗೌಡ ಅವರ ಆಸ್ತಿ ಮತ್ತು ಆದಾಯದ ವಿವರಗಳನ್ನು ಅಧಿಕಾರಿಗಳು ಸಂಗ್ರಹಿಸಿದರು.

ADVERTISEMENT

‘ಕಾಫಿ ಮಂಡಳಿ, ತೋಟಗಾರಿಕೆ ಮತ್ತು ಕೃಷಿ ಇಲಾಖೆಗಳ 15ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಸೋಮವಾರ ಮತ್ತು ಮಂಗಳವಾರ ಭೇಟಿ ನೀಡಿ ಆಸ್ತಿಯ ಮೌಲ್ಯಮಾಪನ ನಡೆಸಿದೆ.

ಬಾಸಾಪುರ, ಹಲಸೂರು ಸೇರಿ ವಿವಿಧೆಡೆ ಆಸ್ತಿ, ಆದಾಯದ ವಿವರಗಳನ್ನು ಸಂಗ್ರಹಿಸಿದೆ. ‘ಎಲ್ಲ ಅಗತ್ಯ ದಾಖಲೆಗಳನ್ನು ಒದಗಿಸಿ, ತನಿಖೆಗೆ ಸಹಕಾರ ನೀಡುತ್ತಿದ್ದೇನೆ’ ಎಂದು ಶಾಸಕ ಟಿ.ಡಿ. ರಾಜೇಗೌಡ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದಾಖಲೆ ಪರಿಶೀಲನೆ ರಾಜಕೀಯ ಪ್ರೇರಿತವಾಗಿದೆ. ದೂರಿನಲ್ಲಿ ಯಾವುದೇ ಹುರುಳಿಲ್ಲ ಎಂಬುದು ಸ್ಪಷ್ಟ. ವ್ಯಕ್ತಿಯೊಬ್ಬರ ಅರ್ಜಿ ಆಧರಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನ ಆದೇಶದಂತೆ ಎಫ್‌ಐಆರ್ ದಾಖಲಿಸಿ ಲೋಕಾಯುಕ್ತ ತನಿಖೆ ನಡೆಯುತ್ತಿದೆ’ ಎಂದರು.

‘ಆದಾಯ ತೆರಿಗೆ ಇಲಾಖೆಗೆ ವಂಚನೆ ಕುರಿತು ಸಮಗ್ರ ತನಿಖೆ ನಡೆಸಬೇಕು’ ಎಂದು ಕೋರಿ ಕೊಪ್ಪ ನಿವಾಸಿ ದಿನೇಶ್ ಎಚ್.ಕೆ. ಖಾಸಗಿ ದೂರು ಸಲ್ಲಿಸಿದ್ದರು. ರಾಜೇಗೌಡ, ಪತ್ನಿ ಡಿ.ಕೆ.ಪುಷ್ಪಾ, ಪುತ್ರ ರಾಜ್‌ದೇವ್ ವಿರುದ್ಧ 2025ರ ಸೆ.23ರಂದು ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.