
ಪ್ರಜಾವಾಣಿ ವಾರ್ತೆ
ಚಿಕ್ಕಮಗಳೂರು: ಕಡೂರು- ಮೂಡಿಗೆರೆ ಹೆದ್ದಾರಿ ಹಿರೇಗೌಜ ಬಳಿ ಟಿಪ್ಪರ್ ಲಾರಿ, ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ದಂಪತಿ ಮೃತಪಟ್ಟಿದ್ದು, 14 ತಿಂಗಳ ಮಗುವಿನ ಸ್ಥಿತಿ ಗಂಭೀರವಾಗಿದೆ.
ಶಿವಮೊಗ್ಗದ ಆಸೀಫ್(38), ಮಾಜಿನಾ(33) ಸ್ಥಳದಲ್ಲಿ ಮೃತಪಟ್ಟರು. ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.