
ಚಿಕ್ಕಮಗಳೂರು: ಸರ್ಕಾರದ ವಿವಿಧ ಇಲಾಖೆಗಳ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಹೊರಡಿಸಿರುವ ಕ್ರಮಗಳು ಖಂಡನೀಯ, ಒಳಮೀಸಲಾತಿ ಜಾರಿಯಾದ ನಂತರವೇ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಂತೆ ಜಿಲ್ಲಾ ಮಾದಿಗ ಸಮಾಜ ಹೋರಾಟಗಾರ ಚಂದ್ರಶೇಖರ್ ತಿಳಿಸಿದರು.
ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಬ್ಯಾಕ್‌ಲಾಗ್ ಹುದ್ದೆಗಳನ್ನು ತರಾತುರಿಯಲ್ಲಿ ಭರ್ತಿ ಮಾಡಲು ಹೊರಡಿಸಿರುವ ಕ್ರಮ ರಾಜ್ಯದ ಮಾದಿಗ ಸಮಾಜಕ್ಕೆ ಮಾಡುವ ಅನ್ಯಾಯ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಹೇಳಿದರು.
ಸದಾಶಿವ ಆಯೋಗದ ವರದಿ ಜಾರಿ ಮಾಡಿ ಒಳಮೀಸಲಾತಿ ಕಲ್ಪಿಸಲು ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗ ರಚನೆಯಾಗಿದೆ. ಕೂಡಲೇ ವರದಿ ಪಡದು ಒಳ ಮೀಸಲಾತಿ ಜಾರಿ ಮಾಡಬೇಕು. ಅದಕ್ಕೂ ಮುನ್ನವೇ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಮಾಡಲು ಮುಂದಾಗಿರುವ ಸಚಿವ ಎಚ್.ಸಿ ಮಹದೇವಪ್ಪ ಅವರ ಕ್ರಮ ಸರಿಯಲ್ಲ ಎಂದರು.
ಸರ್ಕಾರದ ಈ ನಡೆ ಖಂಡಿಸಿ ಮಾ.19 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಮಾದಿಗ ಸಮಾಜದ ಮುಖಂಡರಾದ ಜಗದೀಶ್, ಗೋವಿಂದ್, ಲಕ್ಷ್ಮಣ್, ನಾಗೇಂದ್ರ, ರಾಜಣ್ಣ, ಚಂದ್ರಶೇಖರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.