ADVERTISEMENT

ಮದುವೆಯಾಗುವುದಾಗಿ ನಂಬಿಸಿ ಬಾಲಕಿಗೆ ವಂಚನೆ: ಆರೋಪಿಗೆ 20 ವರ್ಷ ಜೈಲು; 1 ಲಕ್ಷ ದಂಡ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2021, 8:29 IST
Last Updated 8 ಅಕ್ಟೋಬರ್ 2021, 8:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಚಿಕ್ಕಮಗಳೂರು: ವಿವಾಹವಾಗುವುದಾಗಿ 17 ಬಾಲಕಿಯನ್ನು ನಂಬಿಸಿ ಗರ್ಭಿಣಿಯಾಗಿಸಿ ವಂಚಿಸಿದ ಪ್ರಕರಣದಲ್ಲಿ ಹೆಡದಾಳಿನ ಗಣೇಶ್‌ಗೆ 20 ವರ್ಷ ಜೈಲು, ₹ 1 ಲಕ್ಷ ದಂಡವನ್ನು ಪೊಕ್ಸೊ ಕೋರ್ಟ್‌ ವಿಧಿಸಿದೆ.

ನ್ಯಾಯಾಧೀಶೆ ವಿನುತಾ ಪಿ.ಶೆಟ್ಟಿ ಅವರು ಈ ಆದೇಶ ನೀಡಿದ್ದಾರೆ.

ಏನಿದು ಪ್ರಕರಣ: ಗಣೇಶ್‌ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಸಂಪರ್ಕ ಬೆಳೆಸಿದ್ದ. ಬಾಲಕಿ ಗರ್ಭಿಣಿಯಾದ ನಂತರ ಮದುವೆಯಾಗುವುದಿಲ್ಲ ಎಂದು ವಂಚಿಸಿದ್ದ.

ADVERTISEMENT

ಆಲ್ದೂರು ಠಾಣೆಯಲ್ಲಿ ಬಾಲಕಿ ದಾಖಲಿಸಿದ್ದರು. ಪೊಕ್ಸೊ ಕಾಯ್ದೆ ಪ್ರಕರಣ ದಾಖಲಾಗಿತ್ತು.

ಇನ್‌ಸ್ಪೆಕ್ಟರ್‌ ವಿನೋದ್‌ ಭಟ್‌ ಅವರು ತನಿಖೆ ನಡೆಸಿ ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪೊಕ್ಸೊ ಕೋರ್ಟ್‌ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಬಿ.ಎಚ್‌.ಶ್ರೀಹರ್ಷ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.