ADVERTISEMENT

ಮಗನ ಸ್ನೇಹಿತೆಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2021, 7:18 IST
Last Updated 10 ನವೆಂಬರ್ 2021, 7:18 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಚಿಕ್ಕಮಗಳೂರು: 15 ವರ್ಷದ ಬಾಲಕಿಯ ಅತ್ಯಾಚಾರದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಮಂಗಳವಾರ ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಬಾಲಕಿ ಸ್ನೇಹಿತನ ಮನೆಗೆ ಹೋಗಿದ್ದಾಳೆ. ಸ್ನೇಹಿತ ಮನೆಯಲ್ಲಿ ಇರಲಿಲ್ಲ. ಸ್ನೇಹಿತನ ತಂದೆ ಬಾಲಕಿ ಯನ್ನು ಮನೆಯಲ್ಲಿ ಉಳಿಸಿಕೊಂಡು ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ತಾಯಿ ದೂರು ನೀಡಿದ್ದಾರೆ.

ADVERTISEMENT

ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ 342 (ಅಕ್ರಮ ಬಂಧನ), ಐಪಿಸಿ 376– 3(ಮಹಿಳೆ ಮೇಲೆ ನಿರಂತರ ಅತ್ಯಾಚಾರ), ಪೊಕ್ಸೊ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.