ಮಂಗಳೂರು ದಸರಾ ಅಂಗವಾಗಿ ಕುದ್ರೋಳಿ ಶ್ರೀಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಪೂಜೆಗೊಂಡ ಶ್ರೀಶಾರದೆಯ ಶೋಭಾಯಾತ್ರೆ (ಸಂಗ್ರಹ ಚಿತ್ರ)
ಪ್ರಜಾವಾಣಿ ಚಿತ್ರ: ಫಕ್ರುದ್ದೀನ್ ಎಚ್
ಮಂಗಳೂರು: ಪ್ರಸಿದ್ಧ ಮಂಗಳೂರು ದಸರಾ ಮಹೋತ್ಸವ ಸೆ.22ರಿಂದ ಅ.3ರವರೆಗೆ ನಡೆಯಲಿದ್ದು, ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರ ಸಜ್ಜುಗೊಂಡಿದೆ. ಶಾರದಾ ಮಾತೆ, ನವದುರ್ಗೆಯರು, ಮಹಾಗಣಪತಿ ಪ್ರತಿಷ್ಠಾಪನೆಯೊಂದಿಗೆ 22ರಂದು ಚಾಲನೆ ಸಿಗಲಿದೆ.
ಮಕ್ಕಳ ದಸರಾ, ಮ್ಯಾರಥಾನ್, ದೇಹದಾರ್ಢ್ಯ ಸ್ಪರ್ಧೆ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನವರಾತ್ರಿ ಉತ್ಸವದಲ್ಲಿ ಮೇಳೈಸಲಿವೆ. ಅ.2ರಂದು ಸಂಜೆ 4ರಿಂದ ಶಾರದಾ ಮಾತೆಯ ವೈಭವದ ಶೋಭಾಯಾತ್ರೆ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಮಂಡಳಿ ಖಜಾಂಚಿ ಪದ್ಮರಾಜ್ ಪೂಜಾರಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.