ADVERTISEMENT

ಧರ್ಮಸ್ಥಳ: ಮೇ 3ರಂದು ಸಾಮೂಹಿಕ ವಿವಾಹ

​ಪ್ರಜಾವಾಣಿ ವಾರ್ತೆ
Published 30 ಜನವರಿ 2023, 4:43 IST
Last Updated 30 ಜನವರಿ 2023, 4:43 IST

ಉಜಿರೆ: ಧರ್ಮಸ್ಥಳದಲ್ಲಿ ಮೇ 3ರಂದು ಸಂಜೆ 6.40ರ ಗೋಧೂಳಿ ಲಗ್ನ ಮುಹೂರ್ತದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ.

ವರನಿಗೆ ಧೋತಿ, ಶಾಲು ಹಾಗೂ ವಧುವಿಗೆ ಸೀರೆ, ರವಕೆ ಕಣ ಹಾಗೂ ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶ ಇರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುತ್ತದೆ.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿವರ್ಷ ನಡೆಸಲಾಗುತ್ತಿದ್ದು, ಈತನಕ ಒಟ್ಟು 12,576 ಜೋಡಿಗಳು ಮದುವೆಯಾಗಿದ್ದಾರೆ.

ADVERTISEMENT

ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲು ಇಚ್ಛಿಸುವವರು ಏಪ್ರಿಲ್ 20ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ದೂರವಾಣಿ: 08256-266644, ವಾಟ್ಸ್‌ಆ್ಯಪ್: 9663464648 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.