ಚಿಕ್ಕಮಗಳೂರು: ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ವರ್ಗಾವಣೆಯಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಮೀನಾ ನಾಗರಾಜ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೀನಾ ನಾಗರಾಜ್, ಈ ಹಿಂದೆ ಮಾಹಿತಿ ತಂತ್ರಜ್ಞಾನ ಮತ್ತು ಬಯೋ ಟೆಕ್ನಾಲಜಿ ಸಂಸ್ಥೆ ನಿರ್ದೇಶಕರಾಗಿದ್ದರು. ಕೆ.ಎನ್.ರಮೇಶ್ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.
ಜಿಲ್ಲಾ ಪಂಚಾಯತಿ ಸಿಇಒ ಆಗಿದ್ದ
ಜಿ.ಪ್ರಭು ಅವರನ್ನು ತುಮಕೂರು ಜಿಲ್ಲೆ ಪಂಚಾಯತಿ ಸಿಇಒ ಆಗಿ ನೇಮಿಸಲಾಗಿದೆ. ಅವರ ಜಾಗಕ್ಕೆ ಯಾರನ್ನೂ ನೇಮಿಸದೆ ಖಾಲಿ ಉಳಿಸಲಾಗಿದೆ.
ತರೀಕೆರೆ ಉಪವಿಭಾಗಾಧಿಕಾರಿ ಸಿದ್ದಲಿಂಗಾರೆಡ್ಡಿ ಅವರನ್ನೂ ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ಹೊಸದಾಗಿ ಕೆ.ಜೆ.ಕಾಂತರಾಜ್ ಅವರನ್ನು ನೇಮಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.