ತರೀಕೆರೆ: ಪ್ರಸಕ್ತ ವರ್ಷದ ಶಾಲೆಗಳು ಪುನರಾರಂಭಗೊಂಡ ಹಿನ್ನೆಲೆ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ ಮುಖ್ಯಸ್ಥರ ಸಭೆ ನಡೆಸಲಾಯಿತು.
ಮಕ್ಕಳ ಸುರಕ್ಷತೆ, ಶಾಲಾ ಬಸ್ ಚಾಲಕರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸುವ ಕುರಿತು ತರೀಕೆರೆ ಪೊಲೀಸ್ ಇನ್‌ಸ್ಪೆಕ್ಟರ್ ರಾಮಚಂದ್ರ ನಾಯಕ್ ಸೂಚನೆ ನೀಡಿದರು. ಪೊಕ್ಸೊ ಹಾಗೂ ಬಾಲ್ಯ ವಿವಾಹ ಕಾಯ್ದೆಗಳ ಜಾಗೃತಿ ಮೂಡಿಸಿ, ಕಟ್ಟುನಿಟ್ಟಿನ ಕಾನೂನು ಪಾಲನೆ ಮಾಡಲು ತಿಳಿಸಲಾಯಿತು.
ಪಿಎಸ್ಐ ನಾಗೇಂದ್ರ ನಾಯ್ಕ, ಆನಂದ್ ಪವಾಸ್ಕರ್ ಹಾಗೂ ಸಿಬ್ಬಂದಿ ರಾಮು, ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.