ADVERTISEMENT

ಬಿಲ್ ಪಾವತಿಗೆ 40 ಸಾವಿರ ಲಂಚ: ಮೆಸ್ಕಾಂ ಎಂಜಿನಿಯರ್ ಲೋಕಾಯುಕ್ತ ಬಲೆಗೆ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2025, 11:21 IST
Last Updated 4 ನವೆಂಬರ್ 2025, 11:21 IST
<div class="paragraphs"><p>ಮಲ್ಲಿಕಾರ್ಜುನಸ್ವಾಮಿ</p></div>

ಮಲ್ಲಿಕಾರ್ಜುನಸ್ವಾಮಿ

   

: ಗುತ್ತಿಗೆದಾರರಿಗೆ ಬಿಲ್ ಪಾವತಿಸಲು ₹40 ಸಾವಿರ ಲಂಚ ಪಡೆಯುತ್ತಿದ್ದ ಮೆಸ್ಕಾಂ ಕಿರಿಯ ಎಂಜಿನಿಯರ್‌ ಮಲ್ಲಿಕಾರ್ಜುನಸ್ವಾಮಿ ಎಂಬುವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಸಿವಿಲ್ ಕಾಮಗಾರಿಯ ಬಾಕಿ ಬಿಲ್ ₹10 ಲಕ್ಷ ಪಾವತಿಸಲು ₹40 ಸಾವಿರ ಬೇಡಿಕೆ ಇಟ್ಟಿದ್ದರು. ಕಾಮಗಾರಿ ಪೂರ್ಣಗೊಂಡು ವರ್ಷ ಕಳೆದಿದ್ದರೂ ಬಿಲ್ ಪಾವತಿಸಲು ಸತಾಯಿಸಿದ್ದರು ಎಂದು ಗುತ್ತಿಗೆದಾರರೊಬ್ಬರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ADVERTISEMENT

ನಗರದ ಆರ್.ಜಿ.ರಸ್ತೆಯಲ್ಲಿನ ಮೆಸ್ಕಾಂ ಕಚೇರಿಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.