ADVERTISEMENT

ಚಿಕ್ಕಮಗಳೂರು | ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಸಜೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2025, 4:54 IST
Last Updated 7 ಆಗಸ್ಟ್ 2025, 4:54 IST
<div class="paragraphs"><p>ಜೈಲು (ಪ್ರಾತಿನಿಧಿಕ ಚಿತ್ರ)</p></div>

ಜೈಲು (ಪ್ರಾತಿನಿಧಿಕ ಚಿತ್ರ)

   

ಚಿಕ್ಕಮಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಲು ಕಾರಣವಾಗಿದ್ದ  ಆರೋಪಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ 20 ವರ್ಷ ಕಠಿಣ ಸಜೆ ವಿಧಿಸಿ ಆದೇಶ ನೀಡಿದೆ.

ಮೂಡಿಗೆರೆ ತಾಲ್ಲೂಕು ವ್ಯಾಪ್ತಿಯ ಯೋಗೀಶ್, ಬಾಲಕಿಯಯನ್ನು ಪ್ರೀತಿಸಿ ಮದುವೆಯಾಗುವುದಾಗಿ ಪುಸಲಾಯಿಸಿ 2024ರ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಅನೇಕ ಬಾರಿ ಅತ್ಯಾಚಾರ ಎಸಗಿದ್ದ ಎಂದು ಪೊಲೀಸರು ದೋಷಾರೋಪ ಸಲ್ಲಿಸಿದ್ದರು.

ADVERTISEMENT

ಬಾಲಕಿ ಗರ್ಭಿಣಿಯಾಗಿ ಡಿಸೆಂಬರ್‌ನಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಪ್ರಕರಣ ದಾಖಲಿಸಿ ಮೂಡಿಗೆರೆ ಇನ್‌ಸ್ಪೆಕ್ಟರ್ ಪಿ.ಸೋಮೇಗೌಡ ನೇತೃತ್ವದ ತಂಡ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿತ್ತು.

ವಿಚಾರಣೆ ನಡೆಸಿದ ನ್ಯಾಯಾಧೀಶರಾದ ರಾಘವೇಂದ್ರ ಗುರುಪ್ರಸಾದ್ ಕುಲಕರ್ಣಿ ಅವರು 20 ವರ್ಷ ಕಠಿಣ ಸಜೆ ಮತ್ತು ₹25 ಸಾವಿರ ದಂಡ ವಿಧಿಸಿ ಅದೇಶ ಹೊರಡಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಭರತ್‌ಕುಮಾರ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.