ADVERTISEMENT

ಮರಕ್ಕೆ ಕಾರು ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಸಾವು

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2019, 14:18 IST
Last Updated 19 ಡಿಸೆಂಬರ್ 2019, 14:18 IST

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆಯ ಮುದ್ರಮನೆ ಬಳಿ ಗುರುವಾರ ಸಂಜೆ ಕಾರೊಂದು ಮರಕ್ಕೆ ಗುದ್ದಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಹರೀಶ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಧ್ಯಾನ್‌ (17) ಮತ್ತು ಆದರ್ಶ್‌ (17) ಮೃತಪಟ್ಟವರು. ಗಾಯಾಳು ಹರ್ಪಿತ್ನನ್ನು (16) ಹಾಸನಕ್ಕೆ ಆಸ್ಪತ್ರೆಗೆ ಒಯ್ಯಲಾಗಿದೆ.

ಸಂಜೆ 6 ಗಂಟೆ ಹೊತ್ತಿನಲ್ಲಿ ಕಾಲೇಜು ರಸ್ತೆಯಲ್ಲಿ ತೆರಳುವಾಗ ಅವಘಡ ಸಂಭವಿಸಿದೆ. ಮೂಡಿಗೆರೆ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.