ನರಸಿಂಹರಾಜಪುರ: ‘ಪದವೀಧರ ನಿರುದ್ಯೋಗಿಗಳಿಗೆ ಯುವನಿಧಿ ವರದಾನವಾಗಿದೆ’ ಎಂದು ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶುಕ್ರವಾರ ಯುವನಿಧಿ ಕಾರ್ಯಕ್ರಮಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಅವರು ಮಾತನಾಡಿದರು.
‘ಅರ್ಹ ಪದವೀಧರರಿಗೆ 2 ವರ್ಷ ಪ್ರತಿ ತಿಂಗಳು ₹3ಸಾವಿರದಂತೆ ಖಾತೆಗೆ ಜಮೆ ಮಾಡಲಾಗುವುದು. ಇದನ್ನು ಬಳಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು, ಸೂಕ್ತ ಉದ್ಯೋಗ ಹುಡುಕಿಕೊಳ್ಳಲು ಅನುಕೂಲವಾಗುತ್ತದೆ. ಇದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ’ ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಶೆಟ್ಟಿ ಮಾತನಾಡಿದರು. ಆರ್ಥಿಕ ಸಂಕಷ್ಟದಲ್ಲಿರುವ ಪದವೀಧರರಿಗೆ ಸೂಕ್ತ ಉದ್ಯೊಗ ಕಂಡುಕೊಳ್ಳಲು ಯುವನಿಧಿ ಸಹಾಯಕವಾಗಲಿದೆ’ ಎಂದರು.
ಪ್ರಾಂಶುಪಾಲ ಧನಂಜಯ, ಮೆಣಸೂರು ಗ್ರಾಮ ಪಂಚಾಯಿತಿ ಸದಸ್ಯ ಬಿನು, ಕಾಂಗ್ರೆಸ್ ಮುಖಂಡ ಕಾಫಿ ಗಿರೀಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್, ಸಹಾಯಕ ಪ್ರಾಧ್ಯಾಪಕರಾದ ನಾಗೇಶ್ ಗೌಡ, ಲಕ್ಷ್ಮಣನಾಯಕ್, ಮಂಜುನಾಥ್ ನಾಯಕ್, ರಾಘವೇಂದ್ರ, ವಿಶ್ವನಾಥ್, ದಿನಕರ್, ಸತೀಶ್, ಪ್ರಸಾದ್. ರುಖಿಯತ್, ರೂಪ, ಮಂಜುಳಾ ಇದ್ದರು. 5 ಬಸ್‌ಗಳಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ತೆರಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.