‘ಮಂಗನ ಕಾಯಿಲೆ’
ಚಿಕ್ಕಮಗಳೂರು: ನರಸಿಂಹರಾಜಪುರ ತಾಲ್ಲೂಕಿನ ಸಂಗಮೇಶ್ವರ ಪೇಟೆಯ 25 ವರ್ಷದ ಯುವಕನಿಗೆ ಮಂಗನ ಕಾಯಿಲೆ ದೃಢಪಟ್ಟಿದೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಕೊಪ್ಪ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ತಪಾಸಣೆ ನಡೆಸಲಾಗಿದೆ. ಸೋಂಕಿತ ವ್ಯಕ್ತಿಯ ರಕ್ತ ಪರೀಕ್ಷೆ ನಡೆಸಿದ್ದು ಕೆಎಫ್‌ಡಿ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸೋಂಕಿತ ಯುವಕ ಸದ್ಯ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.