ಮೂಡಿಗೆರೆ: ತಾಲ್ಲೂಕಿನಾದ್ಯಂತ ಶನಿವಾರ ಸಂಜೆ ಧಾರಾಕಾರ ಮಳೆ ಸುರಿಯಿತು.
ತಾಲ್ಲೂಕಿನಲ್ಲಿ ಇಡಿ ದಿನ ಮೋಡಕವಿದ ವಾತಾವರಣ ಇತ್ತು. ಸಂಜೆ 4ರ ವೇಳೆಗೆ ಪ್ರಾರಂಭವಾದ ಮಳೆ ಒಂದು ಗಂಟೆಗೂ ಅಧಿಕ ಕಾಲ ಸುರಿಯಿತು.
ನಾಲ್ಕೈದು ದಿನಗಳಿಂದ ಹದವಾದ ಮಳೆಯಾಗುತ್ತಿರುವುದರಿಂದ ಕಾಫಿ ತೋಟಗಳಿಗೆ ಗೊಬ್ಬರ ಹಾಕಲಾಗುತ್ತಿದ್ದು, ಶನಿವಾರ ಸುರಿದ ಮಳೆಯು ಗೊಬ್ಬರ ಹಾಕಿರುವ ಬೆಳೆಗಾರರಿಗೆ ವರದಾನವಾಯಿತು.
ಪಟ್ಟಣದ ವೇಣುಗೋಪಾಲಸ್ವಾಮಿ ದೇವಾಲಯದ ಬಳಿಯಿರುವ ಅರಳಿ ಮರವು ಮುರಿದು ರಸ್ತೆಗೆ ಬಿದ್ದಿದ್ದು, ವಿದ್ಯುತ್ ಕಂಬಗಳು ಸಹ ಧರೆಗುರುಳಿ ವಿದ್ಯುತ್ ಪೂರೈಕೆಗೆ ಅಡ್ಡಿಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.