ADVERTISEMENT

ಮೂಡಿಗೆರೆ | ಗೆಲುವಿಗೆ ಆತ್ಮವಿಶ್ವಾಸ ಮುಖ್ಯ: MLC ಪ್ರಾಣೇಶ್

ಮೂಡಿಗೆರೆ: ತಾಲ್ಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 7:16 IST
Last Updated 3 ಡಿಸೆಂಬರ್ 2022, 7:16 IST
ಮೂಡಿಗೆರೆಯ ಹೊಯ್ಸಳ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಕೆ ಪ್ರಾಣೇಶ್ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ. ಹರ್ಷಕುಮಾರ್, ಸಹಾಯಕ ನಿರ್ದೇಶಕ ಡಿ.ಡಿ ಪ್ರಕಾಶ್, ಜುಲೇಖಾ, ಶಿವಾನಂದ್ ಇದ್ದರು
ಮೂಡಿಗೆರೆಯ ಹೊಯ್ಸಳ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಕೆ ಪ್ರಾಣೇಶ್ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ. ಹರ್ಷಕುಮಾರ್, ಸಹಾಯಕ ನಿರ್ದೇಶಕ ಡಿ.ಡಿ ಪ್ರಕಾಶ್, ಜುಲೇಖಾ, ಶಿವಾನಂದ್ ಇದ್ದರು   

ಮೂಡಿಗೆರೆ: ಯಾವುದೇ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಆತ್ಮವಿಶ್ವಾಸ ಮುಖ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಕೆ ಪ್ರಾಣೇಶ್ ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

‘ಗ್ರಾಮೀಣ ಭಾಗದಲ್ಲಿ ಉತ್ಕೃಷ್ಟ ಪ್ರತಿಭೆಗಳಿದ್ದು, ಅವರನ್ನು ಪ್ರೋತ್ಸಾಹಿಸುವ ಸಲುವಾಗಿ ನಮ್ಮ ಸರ್ಕಾರವು ಈ ಬಾರಿ ಇಲಾಖೆ ಮೂಲಕ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಿದೆ. ಪ್ರತಿ ಗ್ರಾಮದಿಂದಲೂ ಕ್ರೀಡಾಪಟುಗಳನ್ನು ಅನ್ವೇಷಿಸಲಾಗಿದೆ. ಇದು ರಾಜ್ಯ ಮಟ್ಟದವರೆಗೂ ತಲುಪಲಿದ್ದು, ಪ್ರತಿ ಕ್ರೀಡಾಪಟು ಅವಿರತವಾಗಿ ಗೆಲುವಿಗೆ ಶ್ರಮಿಸಬೇಕು. ಕ್ರೀಡೆಯಲ್ಲಿ ಸೋಲು, ಗೆಲುವು ನಿಶ್ಚಿತವಾಗಿರುವುದರಿಂದ ಸೋಲಿಗೆ ಎದೆಗುಂದದೆ ನಿರಂತರ ಪ್ರಯತ್ನ ನಡೆಸಬೇಕು’ ಎಂದರು.

ADVERTISEMENT

ಕ್ರೀಡಾಕೂಟವನ್ನು ‌ಉದ್ಘಾಟಿಸಿದ ಶಾಸಕ ಎಂ.ಪಿ ಕುಮಾರಸ್ವಾಮಿ ಮಾತನಾಡಿ, ‘ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸುವುದು ಸರ್ಕಾರದ ಗುರಿಯಾಗಿದೆ. ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯವನ್ನು ಹೊಂದಲು ಸಾಧ್ಯವಾಗುವುದರಿಂದ ನಿರಂತರವಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಉತ್ತಮ ಕ್ರೀಡಾಂಗಣಗಳನ್ನು ನಿರ್ಮಿಸಲಾಗುತ್ತಿದ್ದು, ಅವುಗಳನ್ನು ಬಳಸಿಕೊಳ್ಳಬೇಕು. ಹೊಯ್ಸಳ ಕ್ರೀಡಾಂಗಣದ ಅಭಿವೃದ್ಧಿಗೂ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ. ಹರ್ಷಕುಮಾರ್ ಮಾತನಾಡಿ, ‘ಪ್ರತಿ ಹೋಬಳಿ‌ ಮಟ್ಟದಲ್ಲಿ ಕ್ರೀಡಾಕೂಟವನ್ನು ನಡೆಸಿ ವಿಜೇತರಿಗೆ ತಾಲ್ಲೂಕು ಮಟ್ಟದ ಸ್ಪರ್ಧೆ ನಡೆಸಲಾಗುತ್ತಿದೆ. ಇಲ್ಲಿ ವಿಜೇತರಾದವರು ನಗದು ಬಹುಮಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುತ್ತಾರೆ’ ಎಂದರು.

ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕ ಡಿ.ಡಿ ಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜುಲೇಖಾ, ಶಿವಾನಂದ್, ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.