ADVERTISEMENT

ಬಿಎಸ್‌ವೈ ಸಿಎಂ ಆಗಲು ಹೊತ್ತಿದ್ದ ಹರಕೆ ತೀರಿಸಲು ಸರ್ಕಾರದ ಬೊಕ್ಕಸದಿಂದ ಹಣ

​ಪ್ರಜಾವಾಣಿ ವಾರ್ತೆ
Published 15 ಜನವರಿ 2021, 15:56 IST
Last Updated 15 ಜನವರಿ 2021, 15:56 IST
ಶಾಸಕ ಎಂ.ಪಿ.ಕುಮಾರಸ್ವಾಮಿ
ಶಾಸಕ ಎಂ.ಪಿ.ಕುಮಾರಸ್ವಾಮಿ   

ಚಿಕ್ಕಮಗಳೂರು: ‘ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ಫಲ್ಗುಣಿಯ ಶ್ರೀಕಲಾನಾಥೇಶ್ವರ ದೇಗುಲಕ್ಕೆ ಮರದ ರಥ ಕಾಣಿಕೆ ನೀಡುವುದಾಗಿ ಹರಕೆ ಹೊತ್ತಿದ್ದೆ. ಹರಕೆ ತೀರಿಸಲು ಅನುದಾನ ಬಿಡುಗಡೆಗೆ ಮುಜುರಾಯಿ ಇಲಾಖೆ ಕಾಯದರ್ಶಿಗೆ ಮುಖ್ಯಮಂತ್ರಿ ಆದೇಶ ಮಾಡಿದ್ದಾರೆ, ಅವರಿಗೆ ಧನ್ಯವಾದಗಳು’ ಎಂದು ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ‘ಫೇಸ್‌ಬುಕ್‌’ನಲ್ಲಿ ಪೋಸ್ಟ್‌ ಹಾಕಿದ್ದಾರೆ.

ಸಂಕ್ರಾಂತಿ ಹಬ್ಬದ ಸಿಹಿ ಸುದ್ದಿ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ‘ವಿಶೇಷ ಪ್ರಕರಣ ಎಂದು ಪರಿಗಣಿಸಿ ಮೂಡಿಗೆರೆ ಕ್ಷೇತ್ರದ ಕಲಾನಾಥೇಶ್ವರ ದೇಗುಲಕ್ಕೆ ₹ 25 ಲಕ್ಷ ಬಿಡುಗಡೆ ಮಾಡಲು ಆದೇಶಿಸಿದೆ’ ಎಂದು ಬಿಎಸ್‌ವೈ ಒಕ್ಕಣಿಕೆ ಇರುವ ಪ್ರತಿಯ ಫೋಟೊವನ್ನು ‘ಫೇಸ್‌ಬುಕ್‌’ ಖಾತೆಯಲ್ಲಿ ಹಾಕಿದ್ದಾರೆ.

ಮೂಡಿಗೆರೆ ತಾಲ್ಲೂಕಿನ ಫಲ್ಗುಣಿ ಗ್ರಾಮದ ಕಲಾನಾಥೇಶ್ವರ ದೇಗುಲ ಮರದ ನಿರ್ಮಾಣಕ್ಕೆ ₹ 30 ಲಕ್ಷ, ಬೆಟಗೇರಿ ಗ್ರಾಮದ ಕಲಾ ಭೈರವೇಶ್ವರ ದೇಗುಲ ಜೀರ್ಣೋದ್ಧಾರಕ್ಕೆ ₹ 5 ಲಕ್ಷ ಅನುದಾನ ಮಂಜೂರು ಮಾಡುವಂತೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದರು.

ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ರಥ ಕಾಣಿಕೆ ಹರಕೆ ತೀರಿಸಲು ಸರ್ಕಾರದಿಂದ ಬೊಕ್ಕಸದಿಂದ ಹಣ ಬಿಡುಗಡೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.