ADVERTISEMENT

ಆಡಳಿತಕ್ಕೆ ಜನರ ಸಹಭಾಗಿತ್ವ ಅಗತ್ಯ

ಕುಂದೂರು: ಗ್ರಾಮದ ನಕ್ಷೆಯೊಂದಿಗೆ ಅಭಿವೃದ್ಧಿಯ ಚರ್ಚೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2022, 5:52 IST
Last Updated 2 ಅಕ್ಟೋಬರ್ 2022, 5:52 IST
ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ದೂರದೃಷ್ಟಿ ಯೋಜನೆಯಡಿಯಲ್ಲಿ ಗ್ರಾಮಸ್ಥರೊಂದಿಗೆ ಗ್ರಾಮದ ನಕ್ಷೆ ತಯಾರಿಸಿ ಅಭಿವೃದ್ಧಿ ಕಾರ್ಯಗಳ ಚರ್ಚೆ ನಡೆಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಬಿ ವಿಜೇಂದ್ರ, ಸದಸ್ಯರಾದ ಜಯಂತಿ, ಸುನೀತ, ಒಕ್ಕೂಟದ ಅಧ್ಯಕ್ಷೆ ಶಾಲಿನಿ ಜೀವನ್, ಕಲ್ಪನಾ, ಉಮಾದೇವಿ, ಶೈಲಾ, ಮಮತಾ ಇದ್ದರು.
ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ದೂರದೃಷ್ಟಿ ಯೋಜನೆಯಡಿಯಲ್ಲಿ ಗ್ರಾಮಸ್ಥರೊಂದಿಗೆ ಗ್ರಾಮದ ನಕ್ಷೆ ತಯಾರಿಸಿ ಅಭಿವೃದ್ಧಿ ಕಾರ್ಯಗಳ ಚರ್ಚೆ ನಡೆಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಬಿ ವಿಜೇಂದ್ರ, ಸದಸ್ಯರಾದ ಜಯಂತಿ, ಸುನೀತ, ಒಕ್ಕೂಟದ ಅಧ್ಯಕ್ಷೆ ಶಾಲಿನಿ ಜೀವನ್, ಕಲ್ಪನಾ, ಉಮಾದೇವಿ, ಶೈಲಾ, ಮಮತಾ ಇದ್ದರು.   

ಮೂಡಿಗೆರೆ: ಅಭಿವೃದ್ಧಿಯ ಆಡಳಿತವನ್ನು ನಡೆಸಲು ಗ್ರಾಮದ ಎಲ್ಲಾ ಜನರ ಸಹಭಾಗಿತ್ವವು ಅಗತ್ಯ ಎಂದು ಕುಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಬಿ ವಿಜೇಂದ್ರ ತಿಳಿಸಿದರು.

ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಕುಂದೂರು ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ತಯಾರಿ ಚಟುವಟಿಕೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಆಡಳಿತದಲ್ಲಿ ಜನರ ಸಹಭಾಗಿತ್ವ ಅಗತ್ಯವಿದೆ. ಸರ್ಕಾರದಿಂದ ಬರುವ ಅನುದಾನಗಳು ಗರಿಷ್ಠ ಪ್ರಮಾಣದಲ್ಲಿ ಸದ್ಭಳಕೆಯಾಗಲು ದೂರದೃಷ್ಟಿ ಯೋಜನೆಯು ಸಹಕಾರಿಯಾಗುತ್ತದೆ. ಗ್ರಾಮದಲ್ಲಿ ನಡೆಯಬೇಕಿರುವ ಅಭಿವೃದ್ಧಿ ಕಾರ್ಯಗಳಿಗೆ ಪ್ರತಿಯೊಬ್ಬರ ಸಲಹೆ ಸಹಕಾರವೂ ಮುಖ್ಯವಾಗುತ್ತದೆ. ಅಭಿವೃದ್ಧಿ ಕಾರ್ಯಗಳನ್ನು ಆದ್ಯತೆಗೆ ಅನುಸಾರವಾಗಿ ಕೈಗೊಂಡರೆ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ. ಗ್ರಾಮ ಪಂಚಾಯಿತಿಯಲ್ಲಿ ಉದ್ಯಾನ, ಕಸ ವಿಂಗಡಣೆ ಘಟಕ, ಕ್ರೀಡಾಂಗಣ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದೆ’ ಎಂದರು.

ADVERTISEMENT

ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶಾಲಿನಿ ಜೀವನ್ ಮಾತನಾಡಿ, ‘ಮಹಿಳೆಯರ ಕಲ್ಯಾಣಕ್ಕಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಒಕ್ಕೂಟದ ವ್ಯಾಪ್ತಿಯ ಮಹಿಳೆಯರ ಆರ್ಥಿಕ ಪ್ರಗತಿಗಾಗಿ ಪ್ರತಿ ತಿಂಗಳಿನಲ್ಲೂ ಮಾಸಿಕ ಸಂತೆಯನ್ನು ನಡೆಸಲಾಗುತ್ತಿದ್ದು, ಮಹಿಳೆಯರು ತಮ್ಮಲ್ಲಿ ಲಭ್ಯವಾಗುವ ಉತ್ಪನ್ನಗಳನ್ನು ಮಾಸಿಕ ಸಂತೆಗಳಲ್ಲಿ ಮಾರಾಟ ಮಾಡಿ ಲಾಭಗಳಿಸಬಹುದಾಗಿದೆ’ ಎಂದರು.

ಅಂಗನವಾಡಿ ಒಕ್ಕೂಟದ ಅಧ್ಯಕ್ಷೆ ಶೈಲಾ ಮಾತನಾಡಿ, ‘ಎಲ್ಲಾ ಯೋಜನೆಗಳನ್ನು ಮಹಿಳೆಯರಿಗೆ ಜಾರಿಗೊಳಿಸಲಾಗುತ್ತಿದೆ. ಮಹಿಳೆಯರು ಆರ್ಥಿಕವಾಗಿ ಪ್ರಗತಿ ಸಾಧಿಸಿದರೆ, ಇಡೀ ಕುಟುಂಬವೇ ಆರ್ಥಿಕವಾಗಿ ಮುನ್ನೆಡೆ ಹೊಂದಬಹುದು. ಸ್ವಸಹಾಯ ಸಂಘಗಳ ಕಾರ್ಯಕರ್ತರು ಗುಂಪು ಚಟುವಟಿಕೆಗಳನ್ನು ನಡೆಸಿ ಆರ್ಥಿಕ ಪ್ರಗತಿ ಸಾಧಿಸಬೇಕು’ ಎಂದರು.

ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿಯಲ್ಲಿ ಗ್ರಾಮದ ಮುಖ್ಯ ರಸ್ತೆಯನ್ನು ಸ್ವಚ್ಛಗೊಳಿಸಲಾಯಿತು. ಗ್ರಾಮ ಪಂಚಾಯಿತಿ ಸದಸ್ಯರಾದ ಸುನೀತಾ, ಜಯಂತಿ, ಅಂಗನವಾಡಿ ಕಾರ್ಯಕರ್ತರಾದ ಶಕುಂತಲಾ, ಮಮತಾ, ಪಿಡಿಒ ವಾಸುದೇವ, ಉಮೇಶ್, ಪ್ರವೀಣ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.