ADVERTISEMENT

ಮೂಡಿಗೆರೆ: ಕುಡಿದ ಮತ್ತಿನಲ್ಲಿ ತಂದೆಯಿಂದ ಮಗನ ಹತ್ಯೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2026, 6:39 IST
Last Updated 5 ಜನವರಿ 2026, 6:39 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಮೂಡಿಗೆರೆ: ತಾಲ್ಲೂಕಿನ ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಆನೆಗುಂಡಿ ಗ್ರಾಮದಲ್ಲಿ, ಕುಡಿದ ಮತ್ತಿನಲ್ಲಿ ತಂದೆಯೇ ತನ್ನ ಮಗನನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಭೀಕರ ಘಟನೆ ಶನಿವಾರ ರಾತ್ರಿ ನಡೆದಿದೆ.

ಪ್ರದೀಪ್ ಆಚಾರ್ (29) ಮೃತಪಟ್ಟವರು. ತಂದೆ ರಮೇಶ್ ಆಚಾರ್ ಆರೋಪಿ.

ADVERTISEMENT

ಕ್ಷುಲಕ ಕಾರಣಕ್ಕೆ ಮದ್ಯಪಾನ ಮಾಡಿ ಆಗಾಗ್ಗೆ ಮನೆಯಲ್ಲೇ ಗಲಾಟೆ ಮಾಡುತ್ತಿದ್ದ ತಂದೆ–ಮಗನ ನಡುವಿನ ಕಲಹ ತೀವ್ರವಾಗಿದ್ದು, ಅವರ ಕಾಟದಿಂದ ಬೇಸತ್ತ ಪ್ರದೀಪ್ ತಾಯಿ ಮನೆ ಬಿಟ್ಟು ಹೋಗಿದ್ದರು. ನಂತರ, ಮನೆಯಲ್ಲಿ ತಂದೆ–ಮಗ ಇಬ್ಬರೇ ವಾಸವಿದ್ದರು ಎನ್ನಲಾಗಿದೆ. ಶನಿವಾರ ರಾತ್ರಿ ಮದ್ಯದ ಅಮಲಿನಲ್ಲಿ ರಮೇಶ್ ಆಚಾರ್ ತನ್ನ ಮಗ ಪ್ರದೀಪ್‌ನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೈದಿದ್ದಾನೆ. ಗಂಭೀರ ಗಾಯಗೊಂಡ ಪ್ರದೀಪ್ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ.

ಬೆಳಿಗ್ಗೆ ಮಗನ ಮೃತದೇಹವನ್ನು ಹಾಲ್‌ನಿಂದ ಹೊರಾಂಗಣಕ್ಕೆ ಎಳೆದು ತಂದಿದ್ದ ರಮೇಶ್‌ನನ್ನು ಕಂಡ ಅಕ್ಕಪಕ್ಕದವರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೀತೇಂದ್ರ ಕುಮಾರ್ ದಯಾಮ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.