ಮೂಡಿಗೆರೆ: ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಧಾರಾಕಾರವಾಗಿ ಮಳೆ ಸುರಿಯಿತು.
ಹಗಲಿಡೀ ಬಿಸಿಲು ಕಾಣಿಸಿಕೊಂಡು ಜನರು ನಿಟ್ಟುಸಿರು ಬಿಡುವಂತೆ ಮಾಡಿತ್ತು. ಸಂಜೆ 4ರ ವೇಳೆಗೆ ಮೋಡ ಕವಿದ ವಾತಾವರಣ ಸೃಷ್ಟಿಯಾಗಿ ಗಂಟೆಗೂ ಅಧಿಕ ಕಾಲ ಮಳೆಯಾಯಿತು.
ಪಟ್ಟಣ ಸೇರಿದಂತೆ ಬೀಜುವಳ್ಳಿ, ಹ್ಯಾಂಡ್ ಪೋಸ್ಟ್, ಕೃಷ್ಣಾಪುರ ಮುಂತಾದ ಭಾಗಗಳಲ್ಲಿ ರಭಸದಿಂದ ಮಳೆಯಾಗಿದೆ. ಇದರಿಂದ ಪಟ್ಟಣದಲ್ಲಿ ಒಳಚರಂಡಿಗಳು ತುಂಬಿ, ಮಳೆ ನೀರೆಲ್ಲವೂ ರಸ್ತೆ ಮೇಲೆ ಹರಿದಿದ್ದರಿಂದ ಮಾರ್ಕೆಟ್ ರಸ್ತೆ, ತತ್ಕೊಳ ರಸ್ತೆ ಸೇರಿದಂತೆ ಹಲವು ತಗ್ಗು ಪ್ರದೇಶಗಳಲ್ಲಿ ಜನರು ಸಂಕಷ್ಟ ಎದುರಿಸುವಂತಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.