ಮೂಡಿಗೆರೆ: ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರವು ಜಾರಿಗೆ ತರುತ್ತಿರುವ ಹೊಸ ಯೋಜನೆಗಳೇ ಸಾಕ್ಷಿಯಾಗಿವೆ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.
ಪಟ್ಟಣದಲ್ಲಿ ನಮ್ಮ ಕ್ಲಿನಿಕ್ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಸರ್ಕಾರವು ಜಿಲ್ಲೆಯಲ್ಲಿ 12 ನಮ್ಮ ಕ್ಲಿನಿಕ್ ಆರಂಭಿಸಿದೆ. ಇದೊಂದು ಜನಪರ ಯೋಜನೆಯಾಗಿದೆ. ಕಾರ್ಮಿಕರು ಆರೋಗ್ಯ ಕಾಪಾಡಿಕೊಳ್ಳಲು ಸರ್ಕಾರ ಹೈಟೆಕ್ ಸಂಚಾರಿ ಆರೋಗ್ಯ ಕ್ಲಿನಿಕ್ ಸ್ಥಾಪಿಸಿದ್ದು, ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲೂ ಸಂಚಾರಿ ಆರೋಗ್ಯ ಕ್ಲಿನಿಕ್‍ಗೆ ಚಾಲನೆ ನೀಡಲಾಗಿದೆ. ನಮ್ಮ ಕ್ಲಿನಿಕ್‍ನಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರಿಗೆ ಮಾಸಿಕ ₹ 63 ಸಾವಿರ ವೇತನ ನೀಡಲಾಗುತ್ತಿದೆ. ಸರ್ಕಾರದಲ್ಲಿ ಹಣವಿಲ್ಲ ಎಂದು ಟೀಕೆ ಮಾಡುವವರೂ ರಾಜ್ಯ ಸರ್ಕಾರದ ಹೊಸ ಯೋಜನೆಗಳನ್ನು ಗಮನಿಸುತ್ತಿದ್ದಾರೆ. ಅವರ ಟೀಕೆಗಳು ಸುಳ್ಳು ಎಂದು ಅವರಿಗೂ ಗೊತ್ತಿದೆʼ ಎಂದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ್ ಹೊಸ್ಕೆರೆ, ಸದಸ್ಯರಾದ ಅನುಕುಮಾರ್, ಆಶಾ ಮೋಹನ್, ಮನೋಜ್‍ಕುಮಾರ್, ಕಮಲಾಕ್ಷಿ, ಸುಧೀರ್, ಚಿಕ್ಕಳ್ಳ ಶಂಕರ್, ಕೆಡಿಪಿ ಸದಸ್ಯ ಸುರೇಂದ್ರ ಉಗ್ಗೇಹಳ್ಳಿ, ಡಿಎಚ್‍ಒ ಅಶ್ವಥ್‍ಬಾಬು, ಆರ್‌ಸಿಎಚ್ ಅಧಿಕಾರಿ ಡಾ.ಮಂಜುನಾಥ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಹರೀಶ್‍ಬಾಬು, ಎನ್‍ವಿಬಿಡಿಸಿಪಿ ಅಧಿಕಾರಿ ಡಾ.ಬಾಲಕೃಷ್ಣ, ಎಂಜಿಎಂ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಪ್ರಿಯಾಂಕ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.