ಮೂಡಿಗೆರೆ: ಪಟ್ಟಣದ ಹ್ಯಾಂಡ್‍ಪೋಸ್ಟ್‌ನಿಂದ ಚಿಕ್ಕಮಗಳೂರು ಮೂಗುತಿಹಳ್ಳಿವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಶೀಘ್ರವಾಗಿ ಚಾಲನೆ ನೀಡಬೇಕು ಎಂದು ರೈತ ಸಂಘದ ಹಸಿರುಸೇನೆ ಕಾರ್ಯಾಧ್ಯಕ್ಷ ಬಿ.ಸಿ.ದಯಾಕರ್ ಒತ್ತಾಯಿಸಿದರು.
ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಸ್ತೆ ವಿಸ್ತರಣೆಗಾಗಿ ರಸ್ತೆ ಬದಿಯಲ್ಲಿರುವ ಮರಗಳನ್ನು ಕಡಿತಲೆ ಮಾಡುವ ಬಗ್ಗೆ ಬಿಎಸ್‍ಪಿ ಮುಖಂಡರು ವಿರೋಧ ವ್ಯಕ್ತಪಡಿಸುತ್ತಿರುವುದು ಖಂಡನೀಯ. ರೈತರು ತ್ವರಿತವಾಗಿ ಬೆಳೆ ಸಾಗಿಸಲು, ಪಟ್ಟಣಕ್ಕೆ ಬರುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ವಾಹನ ದಟ್ಟಣೆಯಿಂದ ಪಡುತ್ತಿರುವ ಸಂಕಷ್ಟ ನಿವಾರಣೆಯಾಗಬೇಕಾದರೆ ರಸ್ತೆ ವಿಸ್ತರಣೆ ಆಗಲೇಬೇಕು. ಮರ ಕಡಿತಲೆ, ರಾಜಕೀಯ ಒತ್ತಡಗಳಿಗೆ ಮಣಿದು ರಸ್ತೆ ವಿಸ್ತರಣೆ ವಿಳಂಬ ಮಾಡಬಾರದುʼ ಎಂದು ಆಗ್ರಹಿಸಿದರು.
ಜಿಲ್ಲಾ ಸಂಚಾಲಕ ಡಿ.ಎಸ್.ರಮೇಶ್‍ಗೌಡ ಮಾತನಾಡಿ, ‘ಜಿಲ್ಲೆಯ ಎಲ್ಲ ತಾಲ್ಲೂಕಿನಲ್ಲಿ ರಸ್ತೆ ವಿಸ್ತರಣೆ ಆಗಿದೆ. ಮೂಡಿಗೆರೆಯಲ್ಲಿ ಮಾತ್ರ ಆಗಿಲ್ಲ. ಈ ಕೊರತೆಯನ್ನು ನೀಗಿಸಬೇಕು’ ಎಂದು ಎಂದು ಒತ್ತಾಯಿಸಿದರು.
ಉಪಾಧ್ಯಕ್ಷ ಸುಧೀರ್, ತಾಲ್ಲೂಕು ಸಂಚಾಲಕ ರಾಮಚಂದ್ರೇಗೌಡ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.