
ಮೂಡಿಗೆರೆ: ಯುವಕನೊಬ್ಬ ಕೆರೆಗೆ ಬಿದ್ದು ಮೃತಪಟ್ಟ ಘಟನೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕನ್ನಗೆರೆ ಗ್ರಾಮದಲ್ಲಿ ನಡೆದಿದೆ.
ಜೀವಿತ್ (32) ಮೃತಪಟ್ಟವ. ಜೀವಿತ್ ಅವರು ಗುರುವಾರ(ಅ.30) ಸಂಜೆ ಮನೆಯಿಂದ ತೆರಳಿದ್ದ ಬಳಿಕ ಮನೆಗೆ ವಾಪಸ್ ಬಂದಿರಲಿಲ್ಲ. ಕನ್ಮಗೆರೆಯ ಸಮೀಪದ ಕೆರೆಯ ದಡದಲ್ಲಿ ಜೀವಿತ್ ಅವರ ಚಪ್ಪಲಿ ಇರುವುದು ಕಂಡು ಬಂದಿದೆ. ಹುಡುಕಾಟ ನಡೆಸಿದಾಗ ಕೆರೆಯಲ್ಲಿ ಜೀವಿತ್ ಅವರ ಮೃತದೇಹ ಸಿಕ್ಕಿದೆ. ಮೃತರಿಗೆ ತಂದೆ ಸಹೋದರ ಇದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಬಣಕಲ್ ಪೊಲೀಸರು ಹಾಗೂ ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಭೇಟಿ ನೀಡಿ ಶವ ಹೊರ ತೆಗೆದರು. ಜೀವಿತ್ ಅವರು ಸಾಲದ ಬಾಧೆಯಿಂದ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.