ಮೂಡಿಗೆರೆ: ತಾಲ್ಲೂಕಿನಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಕಾರಣ ನದಿಪಾತ್ರಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿರುವುದರಿಂದ ಇದೇ 6 ರಂದು ಶನಿವಾರ ತಾಲ್ಲೂಕಿನ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಗೌತಮ್ ಬಗಾದಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಮೂಡಿಗೆರೆ ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ಶುಕ್ರವಾರ ಸಂಜೆಯ ವೇಳೆಗೆ ಹೇಮಾವತಿ ನದಿಯ ನೀರಿನ ಹರಿಯುವ ಮಟ್ಟ ಗಣನೀಯವಾಗಿ ಹೆಚ್ಚಳವಾಗಿದೆ. ನದಿ ಪಾತ್ರದಲ್ಲಿ ಬೀಳುತ್ತಿರುವ ಮಳೆಯಿಂದಾಗಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದ್ದು, ಬಂಕೇನಹಳ್ಳಿ ಗ್ರಾಮದ ಬಳಿ ಹೇಮಾವತಿಯು ಗದ್ದೆ ಬಯಲಿನ ಮಟ್ಟದಲ್ಲಿ ಹರಿಯುತ್ತಿದ್ದು, ಹಂತೂರು ಗ್ರಾಮದ ಬಳಿ ಸೇತುವೆಯ ಸಮೀಪಕ್ಕೆ ನೀರು ಬಂದಿದೆ. ಉಗ್ಗೆಹಳ್ಳಿ ಗ್ರಾಮದಲ್ಲಿ ಗದ್ದೆಬಯಲನ್ನು ಹೇಮಾವತಿಯು ಜಲಾವೃತ ಮಾಡಿದ್ದು, ಬೆಟ್ಟದಮನೆ ಗ್ರಾಮದ ಬಳಿ ಬೋರ್ಗೆರೆದು ಹರಿಯುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.