ADVERTISEMENT

ಮುಳ್ಳಯ್ಯನಗಿರಿ: ಪ್ರವಾಸ ಮುಂದೂಡಲು ಜಿಲ್ಲಾಡಳಿತ ಸಲಹೆ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2025, 11:30 IST
Last Updated 26 ಆಗಸ್ಟ್ 2025, 11:30 IST
   

ಚಿಕ್ಕಮಗಳೂರು: ಗಣೇಶ ಚತುರ್ಥಿ ಸಂದರ್ಭದಲ್ಲಿ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ಪ್ರವಾಸ ತೆರಳಲು ಉದ್ದೇಶಿಸಿದ್ದರೆ ಮುಂದೂಡುವಂತೆ ಜಿಲ್ಲಾಡಳಿತ ಪ್ರವಾಸಿಗರಿಗೆ ಸಲಹೆ ನೀಡಿದೆ.

ಕಸಬಾ, ವಸ್ತಾರೆ, ಆವತಿ, ಅಂಬಳೆ ಮತ್ತು ಜಾಗರ ಹೋಬಳಿಯ 40ಕ್ಕೂ ಹೆಚ್ಚು ಹಳ್ಳಿಗಳ ಗ್ರಾಮಸ್ಥರು ಮೇಲು ಗದ್ದುಗೆ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ. ಗುರು ನಾರುಕಂತೆ ಮಠಗಳಿಗೆ ತೆರಳಿ ಚೌತಿ ಕಾಯಿ ಒಡೆಸಿ ಪೂಜೆ ಮಾಡಿಸುವುದು ನೂರಾರು ವರ್ಷಗಳಿಂದ ಇರುವ ಪಾರಂಪರಿಕ ಆಚರಣೆ.

ಇದೇ ಸಂದರ್ಭದಲ್ಲಿ ಸಾರ್ವತ್ರಿಕ ರಜೆ ಇರುವುದರಿಂದ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಶ್ರೀ  ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಧಾರ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುವ ನಿರೀಕ್ಷೆ ಇದೆ.

ADVERTISEMENT

ಈ ಮಾರ್ಗಗಳಲ್ಲಿ ಕಿರಿದಾದ ರಸ್ತೆಗಳಿದ್ದು, ಜನ ಹಾಗೂ ವಾಹನಗಳ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಆದ್ದರಿಂದ ಈ ಮಾರ್ಗದಲ್ಲಿ ಹೋಂಸ್ಟೆ, ರೆಸಾರ್ಟ್‌ಗಳಲ್ಲಿ ಮುಂಗಡವಾಗಿ ಕೊಠಡಿಗಳನ್ನು ಕಾಯ್ದಿರಿಸಿರುವ ಪ್ರವಾಸಿಗರನ್ನು ಹೊರತುಪಡಿಸಿ ಉಳಿದವರು ಪ್ರವಾಸ ಮುಂದೂಡುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.