ಮುಳ್ಳಯ್ಯನಗಿರಿ ಪ್ರವಾಸಿ ತಾಣದಲ್ಲಿ ವಾಹನಗಳ ಸಾಲು
– ಸಂಗ್ರಹ ಚಿತ್ರ
ಚಿಕ್ಕಮಗಳೂರು: ಮುಳ್ಳಯ್ಯನ ಗಿರಿ ಸೇರಿ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಿಗರ ದಟ್ಟಣೆ ನಿವಾರಿಸಲು ಏಕಕಾಲಕ್ಕೆ 600 ವಾಹನಗಳಿಗೆ, ದಿನಕ್ಕೆ 1200 ವಾಹನಗಳಿಗಷ್ಟೇ ಅವಕಾಶ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.
ವಾರಾಂತ್ಯದಲ್ಲಿ 3 ಸಾವಿರಕ್ಕೂ ಹೆಚ್ಚು ವಾಹನಗಳು ತೆರಳುತ್ತಿದ್ದು, ದಟ್ಟಣೆ ಹೆಚ್ಚಿತ್ತು.ಈ ಕಾರಣದಿಂದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆ ಈ ನಿರ್ಧಾರ ಕೈಗೊಂಡಿದೆ.
‘ತಲಾ 100 ಬೈಕ್, ಟ್ಯಾಕ್ಸಿ, 50 ಟೆಂಪೊ ಟ್ರಾವೆಲರ್‌ಗಳಿಗೆ ಅವಕಾಶ ಸಿಗಲಿದೆ. ವೆಬ್‌ಸೈಟ್ ರೂಪಿಸಲಿದ್ದು, ವಾರದಲ್ಲಿ ವ್ಯವಸ್ಥೆ ಜಾರಿಗೆ ಬರಲಿದೆ. ಮೊದಲು ನೋಂದಣಿ ಆದ ವಾಹನಗಳಿಗೆ ಅವಕಾಶ’ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಎಂ.ಆರ್.ಲೋಹಿತ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.