ADVERTISEMENT

ಮುಸ್ಲಿಂ ಮೀಸಲಾತಿ ಮರು ಜಾರಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2023, 16:27 IST
Last Updated 1 ಏಪ್ರಿಲ್ 2023, 16:27 IST
ಮೂಡಿಗೆರೆ ಎಸ್‍ಡಿಪಿಐ ಮುಖಂಡರು ಮುಸ್ಲಿಂ ಮೀಸಲಾತಿಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ ಶನಿವಾರ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು
ಮೂಡಿಗೆರೆ ಎಸ್‍ಡಿಪಿಐ ಮುಖಂಡರು ಮುಸ್ಲಿಂ ಮೀಸಲಾತಿಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ ಶನಿವಾರ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು   

ಮೂಡಿಗೆರೆ: ಮುಸ್ಲಿಮರಿಗೆ ನೀಡಿದ್ದ 2ಬಿ ಮೀಸಲಾತಿಯನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಶನಿವಾರ ಎಸ್‌ಡಿಪಿಐ ಪದಾಧಿಕಾರಿಗಳು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

‘ಸಂವಿಧಾನವು ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಮೀಸಲಾತಿ ಹಕ್ಕನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಸಿದುಕೊಂಡಿದೆ. ಇದು ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿರುವ ದಾಳಿಯಾಗಿದೆ. ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ತಡೆಯೊಡ್ಡುವ ಹಾಗೂ ಮುಖ್ಯವಾಹಿನಿಗೆ ಬರದಂತೆ ತಡೆಯುವ ಷಡ್ಯಂತ್ರದ ಭಾಗವಾಗಿ 2(ಬಿ) ಮೀಸಲಾತಿಯನ್ನು ರದ್ದುಪಡಿಸಲಾಗಿದೆ. ಸಂವಿಧಾನದ ಆಶಯದಂತೆ ಸರ್ಕಾರ ಆಡಳಿತ ನಡೆಸಬೇಕೇ ಹೊರತು, ತನ್ನದೇ ಆದ ಗುಪ್ತ ಅಜೆಂಡಾವನ್ನು ಜಾರಿಗೊಳಿಸುವುದು ಸರಿಯಲ್ಲ. ಆದ್ದರಿಂದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಮುಸ್ಲಿಮರ ಹಿತದೃಷ್ಟಿಯಿಂದ ಸರ್ಕಾರ ಕರ್ತವ್ಯ ನಿರ್ವಹಿಸಬೇಕು. ಕಸಿದುಕೊಂಡಿರುವ ಮೀಸಲಾತಿಯನ್ನು ಪುನರ್ ಸ್ಥಾಪಿಸುವಂತೆ ರಾಜ್ಯಪಾಲರು ನಿರ್ದೇಶಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಎಸ್‍ಡಿಪಿಐ ತಾಲ್ಲೂಕು ಘಟಕದ ಅಧ್ಯಕ್ಷ ಅಂಗಡಿ ಚಂದ್ರು, ಉಪಾಧ್ಯಕ್ಷ ರಿಜ್ವಾನ್ ಫಲ್ಗುಣಿ, ಮುಖಂಡರಾದ ಖಾಲಿದ್, ಶರೀಫ್, ಜಾವಿದ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.