ನರಸಿಂಹರಾಜಪುರ: ರೈತರು ಜಮೀನು ಒತ್ತುವರಿ ಮಾಡಿಕೊಂಡು ಅರ್ಜಿ ನಮೂನೆ 50, 53, 57, 94ಸಿ, 94ಸಿಸಿ ಸಲ್ಲಿಸಿದ ಮತ್ತು ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆ, 1978ಕ್ಕಿಂತ ಹಿಂದೆ ಒತ್ತುವರಿ ಮಾಡಿಕೊಂಡು ಅರ್ಜಿ ಸಲ್ಲಿಸಿರುವ ಪ್ರಕರಣಗಳು ಇತ್ಯರ್ಥವಾಗುವವರೆಗೂ ಒತ್ತುವರಿ ತೆರವುಗೊಳಿಸಬಾರದು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇಲ್ಲಿ ಆಗಿರುವ ತಪ್ಪುಗಳ ಬಗ್ಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗೆ ಮನವರಿಕೆ ಮಾಡಲಾಗಿದ್ದು ಜಂಟಿ ಸರ್ವೆ ಮುಗಿದು ಗಡಿಗುರುತಿಸುವವರೆಗೂ ಒತ್ತುವರಿ ತೆರವುಗೊಳಿಸಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದರು.
ಮುಖಂಡರಾದ ನಟರಾಜ್, ಕೆ.ಎಂ.ಸುಂದರೇಶ್, ಪ್ರಶಾಂತ್ ಶೆಟ್ಟಿ, ಉಪೇಂದ್ರ, ಎಂ.ಆರ್.ರವಿಶಂಕರ್, ಶಿವಣ್ಣ, ಜುಬೇದಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.