ನರಸಿಂಹರಾಜಪುರ: ಪಟ್ಟಣದ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ 34ನೇ ವರ್ಷದ ಅಯ್ಯಪ್ಪಸ್ವಾಮಿ ದೀಪೋತ್ಸವ, ನಾಗ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಸಂಘದ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು.
ದೀಪೋತ್ಸವದ ಪ್ರಯುಕ್ತ ಬೆಳಿಗ್ಗೆ ಧ್ವಜಾರೋಹಣ, ಗಣಹೋಮ, ನಾಗರಾಜ ಹೋಮ, ಸುಬ್ರಹ್ಮಣ್ಯ ಹೋಮ, ಅಯ್ಯಪ್ಪಸ್ವಾಮಿ ಹೋಮ, ತುಪ್ಪದ ಅಭಿಷೇಕ, ಬಳಿಕ ಸತ್ಯನಾರಾಯಣ ಪೂಜೆ ನಡೆಯಿತು. ಮಧ್ಯಾಹ್ನ ಸಾಮೂಹಿಕ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಎನ್.ಜಗದೀಶ್ ಭಟ್, ಕೆ.ನಾಗಭೂಷಣ್ ನೇತೃತ್ವದಲ್ಲಿ ಪೂಜಾ ವಿಧಿಗಳು ನಡೆದವು.
ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷ ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ಕೆ.ಸಂತೋಷ್, ಖಜಾಂಚಿ ಮಂಜುನಾಥ್ ಲಾಡ್, ಡಿ.ಜಿ.ಶ್ರೀನಿವಾಸ್, ಲೋಕೇಶ್ ಗುರುಸ್ವಾಮಿ, ಪಿ.ಆರ್.ಸುಕುಮಾರ್, ಪ್ರದೀಪ್ ಕುಮಾರ್, ರಾಮಕೃಷ್ಣ, ಆರ್.ಶಂಕರ್ ಭಾಗವಹಿಸಿದ್ದರು.
ಶಾಸಕ ಟಿ.ಡಿ.ರಾಜೇಗೌಡ, ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಅವರನ್ನು ದೇವಸ್ಥಾನ ಸಮಿತಿಯಿಂದ ಅಭಿನಂದಿಸಲಾಯಿತು.
ಸಂಜೆ ಪೇಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಅಯ್ಯಪ್ಪಸ್ವಾಮಿ ದೇವಸ್ಥಾನದವರೆಗೆ ಪಲ್ಲಕ್ಕಿ ಮೆರವಣಿಗೆ ನಡೆಯಿತು. ವಿರಾಟ್ ವಿಶ್ವಕರ್ಮ ಚಂಡೆ ಬಳಗ ಮೆರವಣಿಗೆಗೆ ಮೆರಗುತಂದಿತು. ರಾತ್ರಿ ರಾಗಮಯೂರಿ ಅಕಾಡೆಮಿಯಿಂದ ಭರತನಾಟ್ಯ ಆಯೋಜಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.