ಮತ್ತಿಮರ (ನರಸಿಂಹರಾಜಪುರ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದಲ್ಲಿ ಶಾಂತಿ ಹಾಗೂ ಏಕತೆಗಾಗಿ ಶ್ರಮಿಸಿ ಪ್ರೀತಿಯ ವಾತಾವರಣ ನಿರ್ಮಿಸಿದ್ದಾರೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ದಂಡಿನಮಕ್ಕಿ ಶ್ರೀಜಿತ್ ಹೇಳಿದರು.
ರಾಹುಲ್ ಗಾಂಧಿ ಅವರ ಜನ್ಮದಿನದ ಪ್ರಯುಕ್ತ ತಾಲ್ಲೂಕು ಯುವ ಕಾಂಗ್ರೆಸ್ ಘಟಕದಿಂದ ಮತ್ತಿಮರದ ದಿವ್ಯ ಕಾರುಣ್ಯ ಅನಾಥಾಶ್ರಮಕ್ಕೆ ಅಗತ್ಯ ವಸ್ತುಗಳನ್ನು ವಿತರಿಸಿ ಅವರು ಮಾತನಾಡಿದರು.
ರಾಹುಲ್ ಗಾಂಧಿ ಅವರ ಜನ್ಮದಿನವನ್ನು ಅರ್ಥಗರ್ಭಿತವಾಗಿ ಆಚರಿಸಲು ಶಾಲಾ–ಕಾಲೇಜು ಮಕ್ಕಳಿಗೆ ಪುಸ್ತಕ ವಿತರಣೆ, ರಕ್ತದಾನ, ಅನಾಥಾಶ್ರಮಗಳಿಗೆ ಅಗತ್ಯ ವಸ್ತುಗಳ ಪೂರೈಕೆ ಸೇರಿದಂತೆ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ, ತಾಲ್ಲೂಕು ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ರತನ್ ಗೌಡ ಮಾತನಾಡಿದರು. ಕೆಡಿಪಿ ಸದಸ್ಯ ಸಾಜು, ಶೃಂಗೇರಿ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ದುರ್ಗಾ ಚರಣ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜೇಶ್, ಅಭಿಲಾಷ್, ಕೌಶಿಕ್ ಪಟೇಲ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಬೆನ್ನಿ, ಗ್ಯಾರಂಟಿ ಸಮಿತಿ ಸದಸ್ಯ ಎಸ್.ರಘು, ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ದೇವಂತರಾಜ್, ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್, ಯುವ ಕಾಂಗ್ರೆಸ್ ಮುಖಂಡರಾದ ಕಾರ್ತಿಕ್ ಕಾರ್ಗದ್ದೆ, ವಿವೇಕ್, ನಿದೀಶ್, ಪ್ರಿಯೇಶ್ ಇದ್ದರು. ಬೇಡ್ ಶೀಟ್, ದಿನಸಿ ವಸ್ತುಗಳು, ನಿತ್ಯ ಬಳಕೆಯ ಆಹಾರ ಪದಾರ್ಥಗಳನ್ನು ವಿತರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.