ADVERTISEMENT

ಚಿಕ್ಕಮಗಳೂರು: ಬೂತ್ ಮಟ್ಟದಲ್ಲಿ 20 ದಿನಗಳು ಸೇವಾಕಾರ್ಯ -ಕಲ್ಮರುಡಪ್ಪ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 16:40 IST
Last Updated 17 ಸೆಪ್ಟೆಂಬರ್ 2021, 16:40 IST
ಚಿಕ್ಕಮಗಳೂರಿನಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಎಚ್‌.ಸಿ.ಕಲ್ಮರುಡಪ್ಪ ಉದ್ಘಾಟಿಸಿದರು. ಮುಖಂಡರಾದ ರಾಜಪ್ಪ, ವೀಣಾಶೆಟ್ಟಿ, ದೇವರಾಜ್‌ ಶೆಟ್ಟಿ, ಮಧುಕುಮಾರರಾಜ್‌ ಅರಸ್,  ವರಸಿದ್ಧಿ ವೇಣುಗೋಪಾಲ್, ನಾರಾಯಣಸ್ವಾಮಿ ಇದ್ದಾರೆ.
ಚಿಕ್ಕಮಗಳೂರಿನಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಎಚ್‌.ಸಿ.ಕಲ್ಮರುಡಪ್ಪ ಉದ್ಘಾಟಿಸಿದರು. ಮುಖಂಡರಾದ ರಾಜಪ್ಪ, ವೀಣಾಶೆಟ್ಟಿ, ದೇವರಾಜ್‌ ಶೆಟ್ಟಿ, ಮಧುಕುಮಾರರಾಜ್‌ ಅರಸ್,  ವರಸಿದ್ಧಿ ವೇಣುಗೋಪಾಲ್, ನಾರಾಯಣಸ್ವಾಮಿ ಇದ್ದಾರೆ.   

ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಜಿಲ್ಲೆಯಲ್ಲಿ ಬೂತ್ ಮಟ್ಟದಲ್ಲಿ 20 ದಿನಗಳು ಸೇವಾ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಘಟಕದ ಅಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಬಿಜೆಪಿ ವತಿಯಿಂದ ನಗರದ ಉಂಡೇದಾಸರಹಳ್ಳಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

'ಪ್ರಧಾನಿ ನರೇಂದ್ರ ಮೋದಿ ಅವರು 370ನೇ ವಿಧಿ, ತ್ರಿವಳಿ ತಲಾಕ್ ರದ್ದುಗೊಳಿಸಿದರು. ಕೃಷಿ, ಭೂ ಸುಧಾರಣೆ, ಎಪಿಎಂಸಿಹೊಸಕಾಯ್ದೆ ಜಾರಿಗೊಳಿಸಿದರು. ಉಜ್ವಲ್ ಯೋಜನೆಯಡಿ ಬಡವರಿಗೆ ಅಡುಗೆ ಅನಿಲ ಉಚಿತವಾಗಿ ನೀಡಿದರು. ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ನೀಡುತ್ತಿದ್ದಾರೆ. ಹಲವಾರು ಜನಪರ ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದಾರೆ’ ಎಂದು ಹೇಳಿದರು.

ADVERTISEMENT

ಪಕ್ಷದ ಜಿಲ್ಲಾಘಟಕದ ಪ್ರಧಾನ ಕಾರ್ಯದರ್ಶಿ ದೇವರಾಜ್‌ಶೆಟ್ಟಿ ಮಾತನಾಡಿ, ‘ಪ್ರಧಾನಿ ಮೋದಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ’ಎಂದರು.

ಪಕ್ಷದ ಮುಖಂಡರಾದ ಸಂಜು, ನರಸಿಂಹ, ಸತೀಶ್, ಶೋಭಾರಾಜೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.