ADVERTISEMENT

ಚಿಕ್ಕಮಗಳೂರು | ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2026, 2:57 IST
Last Updated 6 ಫೆಬ್ರುವರಿ 2026, 2:57 IST
ಚಿಕ್ಕಮಗಳೂರು ನಗರದ ಬಸವನಹಳ್ಳಿಯ ಭುವನೇಶ್ವರಿ ಪ್ರೌಢಶಾಲೆಯಲ್ಲಿ ನಡೆದ ಬೇಟಿ ಪಢಾವೊ, ಬೇಟಿ ಬಚಾವೊ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ವಿ.ಹನುಮಂತಪ್ಪ ಉದ್ಘಾಟಿಸಿದರು
ಚಿಕ್ಕಮಗಳೂರು ನಗರದ ಬಸವನಹಳ್ಳಿಯ ಭುವನೇಶ್ವರಿ ಪ್ರೌಢಶಾಲೆಯಲ್ಲಿ ನಡೆದ ಬೇಟಿ ಪಢಾವೊ, ಬೇಟಿ ಬಚಾವೊ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ವಿ.ಹನುಮಂತಪ್ಪ ಉದ್ಘಾಟಿಸಿದರು   

ಚಿಕ್ಕಮಗಳೂರು: ಹೆಣ್ಣು ಭ್ರೂಣ ಹತ್ಯೆ ತಡೆಯುವುದು ಹಾಗೂ ಲಿಂಗಾನುಪಾತದಲ್ಲಿ ಸುಧಾರಣೆ ತರುವುದು ಬೇಟಿ ಬಚಾವೊ, ಬೇಟಿ ಪಢಾವೊ ಕಾರ್ಯಕ್ರಮದ ಮೂಲ ಉದ್ದೇಶ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ತಿಳಿಸಿದರು.

ನಗರದ ಬಸವನಹಳ್ಳಿಯ ಭುವನೇಶ್ವರಿ ಪ್ರೌಢಶಾಲೆಯಲ್ಲಿ ನಡೆದ ಬೇಟಿ ಪಢಾವೊ, ಬೇಟಿ ಬಚಾವೊ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಮುಖ್ಯವಾಗಿದ್ದು, ಯಾವುದೇ ಹೆಣ್ಣು ಮಗು ಶಾಲೆಯಿಂದ ದೂರ ಉಳಿಯದಂತೆ ನೋಡಿಕೊಳ್ಳುವುದು ಹಾಗೂ ಅವರ ಸರ್ವತೋಮುಖ ಅಭಿವೃದ್ಧಿಯ ಉದ್ದೇಶ ಇರಿಸಿಕೊಂಡು ಈ ಮಹತ್ವದ ಯೋಜನೆ ಜಾರಿಗೆ ತರಲಾಗಿದೆ ಎಂದು ಹೇಳಿದರು.

ADVERTISEMENT

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ವೈ.ಆಲದಾರ್ತಿ ಮಾತನಾಡಿ, ‘ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವುದು ನಮ್ಮೆಲ್ಲರ ಜವಾಬ್ದಾರಿ ಮಾತ್ರವಲ್ಲ, ಕರ್ತವ್ಯ ಆಗಿದೆ’ ಎಂದು ತಿಳಿಸಿದರು.

ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕ ಡಾ.ಎಸ್.ಕೆ.ಶಶಿಕಾಂತ್ ಅವರು ವಿದ್ಯಾರ್ಥಿ ಜೀವನದಲ್ಲಿ ಮಾನಸಿಕ ಆರೋಗ್ಯದ ಮಹತ್ವದ ಕುರಿತು ಮಾಹಿತಿ ನೀಡಿದರು.

ವಕೀಲೆ ಎಚ್.ಎನ್.ಅರುಂಧತಿ ಅವರು ಪೋಕ್ಸೊ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ಮಕ್ಕಳ ಸಂಬಂಧಿತ ಕಾಯ್ದೆ ಕುರಿತು ಮಾತನಾಡಿದರು.

ಭುವನೇಶ್ವರಿ ಪ್ರೌಢಶಾಲೆಯ ಶಿಕ್ಷಕಿ ಬಿ.ಎಸ್.ಪುಷ್ಪಾ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಡಿ.ಸಂತೋಷ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ರಂಗನಾಥ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.