ಆಲ್ದೂರು: ಸಮೀಪದ ಕೆಳಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಮಹಿಳೆಯರಿಗೆ ಸೀರೆಯನ್ನು ಕಾಂಗ್ರೆಸ್ ಮುಖಂಡರಾದ ನಯನಾ ಮೋಟಮ್ಮ ಭಾನುವಾರ ವಿತರಣೆ ಮಾಡಿದರು.
ಬಳಿಕ ಮಾತನಾಡಿದ ಅವರು, ‘ಮಹಿಳೆಯರು ಸ್ವಾವಲಂಬಿಗಳಾಗಬೇಕು ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಿ ಸಾಬೀತು ಮಾಡಬೇಕು’ ಎಂದರು.
ಈ ವೇಳೆ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಮಹಿಳೆಯರು ಮತ್ತು ಯುವತಿಯರಿಗೆ ಬಹುಮಾನವನ್ನು ವಿತರಿಸಲಾಯಿತು.
ಕಾಂಗ್ರೆಸ್ ಆಲ್ದೂರು ಹೋಬಳಿ ಘಟಕದ ಅಧ್ಯಕ್ಷ ಪೂರ್ಣೇಶ್, ಮುಖಂಡರಾದ ವಿಜಯಣ್ಣ, ಬಸವಯ್ಯ ,ಕುಸುಮಾವತಿ, ಕಿರಣ್, ಪ್ರದೀಪ್, ಚೆನ್ನಕೇಶವ ಬ್ಲಾಕ್ ಕಾರ್ಯದರ್ಶಿ ಸುರೇಶ್, ರಾಜ್ಯ ಕಿಸಾನ್ ಕಾರ್ಯದರ್ಶಿ ಮಂಜುನಾಥ್, ವಸ್ತಾರೆ ಹೋಬಳಿ ಅಧ್ಯಕ್ಷ ಪೂರ್ಣೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.