ADVERTISEMENT

ಕಾಂಗ್ರೆಸ್ಸೊ, ಬಿಜೆಪಿಯೊ..: 3 ವರ್ಷ ಕಾಯೋಣ: ಶಾಸಕಿ ನಯನಾ ಮೋಟಮ್ಮ

​ಪ್ರಜಾವಾಣಿ ವಾರ್ತೆ
Published 29 ಜುಲೈ 2025, 18:30 IST
Last Updated 29 ಜುಲೈ 2025, 18:30 IST
<div class="paragraphs"><p>ನಯನಾ ಮೋಟಮ್ಮ</p></div>

ನಯನಾ ಮೋಟಮ್ಮ

   

ಮೂಡಿಗೆರೆ (ಚಿಕ್ಕಮಗಳೂರು): ‘ಹಿಂದೂವಾಗಿ, ದಲಿತೆಯಾಗಿ ಮೂಡಿಗೆರೆಯಲ್ಲಿ ಜನಿಸಿದ್ದೇನೆ. ಮುಂದೆ ಬಿಜೆಪಿಗೆ ಹೋಗ್ತಿನೊ, ಕಾಂಗ್ರೆಸ್ಸಿನಲ್ಲೇ ಉಳಿತಿನೋ, ಬಿಎಸ್‌ಪಿ ಅಥವಾ ಎಸ್‌ಡಿಪಿಐ ಸೇರುತ್ತೇನೋ ಎಂಬ ಪ್ರಶ್ನೆಗೆ ಮೂರು ವರ್ಷ ಕಾಯೋಣ’ ಎಂದು ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಹೇಳಿದರು.

ಮೂಡಿಗೆರೆಯಲ್ಲಿ ಸಾರ್ವಜನಿಕ ಶ್ರೀಹಿಂದೂ ಮಹಾಸಭಾ ಗಣಪತಿ ಸೇವಾ ಸಮಿತಿ ವತಿಯಿಂದ ನಡೆದ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಸನ್ಮಾನಿಸಲಾಯಿತು. ಶಾಸಕಿ ನಯನಾ ಮೋಟಮ್ಮ ಇದ್ದಾರೆ

ಮೂಡಿಗೆರೆಯಲ್ಲಿ ಹಿಂದೂ ಮಹಾಸಭಾ ಗಣಪತಿ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಅವರು, ‘ಇಂದು ಕೇಸರಿ ಶಾಲು ಹಾಕಿ ಬಂದಿದ್ದೇನೆ. ಪಕ್ಷದ ಕಾರ್ಯಕರ್ತರೂ ಬಂದಿದ್ದಾರೆ. ಈ ಬಗ್ಗೆ ಹಲವರಿಗೆ ಪ್ರಶ್ನೆಗಳಿವೆ. ನದಿ ಎಂದರೆ ಕಾಂಗ್ರೆಸ್ಸಾ, ದಡ ಎಂದರೆ ಬಿಜೆಪಿಯಾ ಎಂಬ ಶಂಕೆ ಬೇಡ’ ಎಂದರು.

ADVERTISEMENT

‘ನಾನು ಗಣಪತಿಗಾಗಿ, ಧರ್ಮಕ್ಕಾಗಿ ಬಂದಿದ್ದೇನೆ. ಶಾಸಕಿಯಾಗಿ ಪಕ್ಷ ಪ್ರತಿನಿಧಿಸುವುದು ಆ ನಂತರ, ಈಗ ಗಣಪತಿ ಸಮಿತಿಯ ಕಾರ್ಯಾಧ್ಯಕ್ಷೆಯಾಗಿ ಇಲ್ಲಿಗೆ ಬಂದಿದ್ದೇನೆ. ಆದ್ದರಿಂದ ಯಾವ ಪಕ್ಷದವರಿಗೂ ಪ್ರಶ್ನೆಗಳು ಉಳಿಯಬಾರದು’ ಎಂದು ಸ್ಪಷ್ಟಪಡಿಸಿದರು.

ಮೂಡಿಗೆರೆಯಲ್ಲಿ ಮಂಗಳವಾರ ಸಾರ್ವಜನಿಕ ಶ್ರೀ ಹಿಂದೂ ಮಹಾಸಭಾ ಗಣಪತಿ ಸೇವಾ ಸಮಿತಿ ಲಾಂಛನವನ್ನು ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಬಿಡುಗಡೆಗೊಳಿಸಿದರು. ಶಾಸಕಿ ನಯನಾ ಮೋಟಮ್ಮ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಇದ್ದಾರೆ

‘ಕಾಂಗ್ರೆಸ್  ಶಾಸಕಿಯಾಗಿಯೂ ನಿಂತಿದ್ದೇನೆ. ಅದನ್ನು ಗುರುತಿಸಿಕೊಳ್ಳಲೇಬೇಕು. ಅದರ ಜೊತೆಗೆ ಸಾಕಷ್ಟು ಅಸ್ತಿತ್ವಗಳು ಇವೆ. ಅದನ್ನೆಲ್ಲಾ ಸೇರಿಸಿಕೊಂಡು ನಯನಾ ಮೋಟಮ್ಮ ಆಗಿದ್ದೇನೆ’ ಎಂದರು.

ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.