ADVERTISEMENT

ಕಾಂಗ್ರೆಸ್ ಸರ್ಕಾರದಲ್ಲಿ ದಲಿತರ ನಿರ್ಲಕ್ಷ್ಯ: ಶಿವಣ್ಣ ಶೃಂಗೇರಿ ಆರೋಪ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2024, 15:26 IST
Last Updated 27 ಮಾರ್ಚ್ 2024, 15:26 IST
ಶಿವಣ್ಣ 
ಶಿವಣ್ಣ    

ಚಿಕ್ಕಮಗಳೂರು: ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪರಿಶಿಷ್ಟರ ಅನುದಾನ ಕಡಿತಗೊಳಿಸಿ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ವಕ್ತಾರ  ಶಿವಣ್ಣ ಶೃಂಗೇರಿ ಆಪಾದಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟರ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಿತ್ತು. ಕಾಂಗ್ರೆಸ್ ಸರ್ಕಾರ ದಲಿತರನ್ನು ಕಡೆಗಣಿಸುತ್ತಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ಮೀಸಲು ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಭಾರತ ಆರ್ಥಿಕತೆಯಲ್ಲಿ ಅಗ್ರಸ್ಥಾನಕ್ಕೆ ಬರಲು ಹಾಗೂ ಬಲಿಷ್ಠರಾಷ್ಟ್ರನ್ನಾಗಿಸಲು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಉಡುಪಿ–ಚಿಕ್ಕಮಗಳೂರು ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿಯನ್ನು ಆಯ್ಕೆ ಮಾಡಿದ್ದು ಹಿಂದೆ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ಗೆಲುವಿಗೆ ಒಗ್ಗಟ್ಟಾಗಿ ಶ್ರಮಿಸಬೇಕು ಎಂದರು.

ADVERTISEMENT

ಗೋಷ್ಠಿಯಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಪಿ.ವೆಂಕಟೇಶ್, ಮುಖಂಡರಾದ ಸೀತಾರಾಂ ಭರಣ್ಯ, ಕೇಶವಮೂರ್ತಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.