ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಖಾಂಡ್ಯ ಹೋಬಳಿಯ ಕಡವಂತಿ ಗ್ರಾಮದ ಬೊಗಸೆಯಲ್ಲಿರುವ ಬಿಎಸ್‌ಎನ್‌ಎಲ್ ಟವರ್‌ನಲ್ಲಿ ನಿತ್ಯ ಸಮಸ್ಯೆ ಎದುರಾಗುತ್ತಿದ್ದು, ನೆಟ್‌ವರ್ಕ್ ಸರಿಯಾಗಿ ಸಿಗುವುದಿಲ್ಲ, ಇದನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಬಿಎಸ್‌ಎನ್‌ಎಲ್ ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ಭಾಗದ ಏಕೈಕ ಟವರ್ ನಿರ್ಮಾಣವಾಗಿ ಒಂದು ವರ್ಷ ಕಳೆದಿದೆ. ಆರಂಭವಾದಾಗಿನಿಂದ ಈವರೆಗೂ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಟವರ್‌ನಲ್ಲಿ ತಾಂತ್ರಿಕ ಸಮಸ್ಯೆ ಎದುರಾದಾಗಲೂ ಅಧಿಕಾರಿಗಳು ಸ್ಥಳಕ್ಕೆ ಬರುವುದಿಲ್ಲ. ಇದರಿಂದ ಮಕ್ಕಳ ಆನ್‌ಲೈನ್ ಹಾಜರಾತಿ, ಪಡಿತರ ವಿತರಣೆಗೆ ತೊಂದರೆಯಾಗಿದೆ. ಕಡವಂತಿ, ಬಾಸಾಪುರ, ಬಿಳಗೊಳ, ಬೊಗಸೆಯಲ್ಲಿ ಗ್ರಾಹಕರು ನೆಟ್‌ವರ್ಕ್ ಸಮಸ್ಯೆ ಅನುಭವಿಸುತ್ತಿದ್ದಾರೆ. 10 ದಿನಗಳ ಒಳಗೆ ಸಮಸ್ಯೆ ಪರಿಹರಿಸದಿದ್ದರೆ ಬಿಎಸ್‌ಎನ್‌ಎಲ್ ಜಿಲ್ಲಾ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.