ADVERTISEMENT

ಮಕ್ಕಳನ್ನೇ ಆಸ್ತಿಯಾಗಿ ಬೆಳೆಸಿ: ಭಾಗ್ಯಾ ನಂಜುಂಡಸ್ವಾಮಿ ಸಲಹೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2022, 5:09 IST
Last Updated 28 ಜೂನ್ 2022, 5:09 IST
ನರಸಿಂಹರಾಜಪುರ ಪಟ್ಟಣ ಸಮೀಪದ ಹಿಳುವಳ್ಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕೇಂದ್ರದ ಆಶ್ರಯದಲ್ಲಿ ನಡೆದ ಮಾಸಿಕ ಸಭೆಯಲ್ಲಿ ಲೇಖಕಿ ಭಾಗ್ಯಾ ನಂಜುಂಡಸ್ವಾಮಿ ಮಾತನಾಡಿದರು.
ನರಸಿಂಹರಾಜಪುರ ಪಟ್ಟಣ ಸಮೀಪದ ಹಿಳುವಳ್ಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕೇಂದ್ರದ ಆಶ್ರಯದಲ್ಲಿ ನಡೆದ ಮಾಸಿಕ ಸಭೆಯಲ್ಲಿ ಲೇಖಕಿ ಭಾಗ್ಯಾ ನಂಜುಂಡಸ್ವಾಮಿ ಮಾತನಾಡಿದರು.   

ನರಸಿಂಹರಾಜಪುರ: ಮಕ್ಕಳಿಗಾಗಿ ಆಸ್ತಿ ಮಾಡದೆ ಮಕ್ಕಳನ್ನೇ ಆಸ್ತಿಯಾಗಿ ಬೆಳೆಸಬೇಕು ಎಂದು ಲೇಖಕಿ ಭಾಗ್ಯಾ ನಂಜುಂಡಸ್ವಾಮಿ ತಿಳಿಸಿದರು.

ತಾಲ್ಲೂಕಿನ ನಾಗಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಳುವಳ್ಳಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಧನಾ ಜ್ಞಾನವಿಕಾಸ ಕೇಂದ್ರದ ಆಶ್ರಯದಲ್ಲಿ ನಡೆದ ಮಾಸಿಕ ಸಭೆಯಲ್ಲಿ ‘ಮಕ್ಕಳಿಗೆ ಮನೆಯಲ್ಲಿ ಸಂಸ್ಕಾರ ಕಲಿಸುವ ಹಾಗೂ ಜೀವನ ಶಿಕ್ಷಣ’ ಕುರಿತು ವಿಶೇಷ ಉಪನ್ಯಾಸ ನೀಡಿದರು.

‘ಮಕ್ಕಳನ್ನು ಉತ್ತಮ ಪ್ರಜೆಯನ್ನಾಗಿ ಮಾಡಲು ಮನೆಯ ಪರಿಸರ, ಗೆಳೆಯರ ಒಡನಾಟ ಹಾಗೂ ಶಾಲಾ ವಾತಾವರಣ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಬಾಲ್ಯದಿಂದಲೇ ಮಕ್ಕಳಿಗೆ ಸಂಸ್ಕಾರದೊಂದಿಗೆ ಕಷ್ಟ ಸುಖಗಳ ಅರಿವು ಮೂಡಿಸಬೇಕಾದು ಇಂದು ಅತಿ ಅವಶ್ಯಕ. ಹಿಂದೆ ಶಿಕ್ಷಣಕ್ಕಾಗಿ ಗುರುಕುಲ ಪದ್ಧತಿ ಇತ್ತು. ಅಲ್ಲಿ ಬದುಕುವ ಕಲೆಯನ್ನು ಮಕ್ಕಳಿಗೆ ಕಲಿಸುತ್ತಿದ್ದರು. ಇಂದು ಅಂತಹ ಶಿಕ್ಷಣದ ಅವಶ್ಯಕತೆ ಇದೆ. ಮಕ್ಕಳಿಗೆ ಉತ್ತಮ ಜೀವನ ಶೈಲಿ ಕಲಿಸಬೇಕಾಗಿದೆ. ತಂದೆ, ತಾಯಿ ದಿನದಲ್ಲಿ ಸ್ವಲ್ಪ ಸಮಯವಾದರೂ ಮಕ್ಕಳೊಂದಿಗೆ ಬೆರೆಯಬೇಕು. ಸೋಲನ್ನು ಧೈರ್ಯವಾಗಿ ಎದುರಿಸುವುದನ್ನು ಮಕ್ಕಳಿಗೆ ಕಲಿಸಬೇಕು’ ಎಂದರು.

ADVERTISEMENT

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಸಿದ್ಧಲಿಂಗಪ್ಪ ಜ್ಞಾನ ವಿಕಾಸ ಕೇಂದ್ರದ ಬಗ್ಗೆ ಮಾಹಿತಿ ನೀಡಿದರು.

ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ವಹಿಸಿದ್ದರು. ಖತೀಜಾ, ಗಾಯತ್ರಿ, ಸೇವಾಪ್ರತಿನಿಧಿ ಶಶಿಕಲಾ, ಕಾವೇರಿ ಸಂಘ, ಸುಬ್ರಹ್ಮಣ್ಯ ಸಂಘ, ಆಶಾ ಕಿರಣ ಸಂಘ, ಸ್ಪೂರ್ತಿ ಸಂಘ ಹಾಗೂ ನಾಗಶ್ರೀ ಸಂಘದ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.