ADVERTISEMENT

ಭೌತಿಕ ತರಗತಿ 30ರಿಂದ ಆರಂಭ: ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌

9, 10ನೇ ತರಗತಿ ಮತ್ತು ಪಿಯುಸಿ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2021, 16:27 IST
Last Updated 29 ಆಗಸ್ಟ್ 2021, 16:27 IST
ಕೆ.ಎನ್‌.ರಮೇಶ್‌
ಕೆ.ಎನ್‌.ರಮೇಶ್‌   

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇದೇ 30ರಿಂದ 9ರಿಂದ 12ನೇ ತರಗತಿವರೆಗೆ ಭೌತಿಕ ತರಗತಿ ಆರಂಭವಾಗಲಿವೆ ಎಂದು ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌ ದೃಢ ಪ್ರಮಾಣ ಶೇ 2ಕ್ಕಿಂತ ಕಡಿಮೆಯಾಗಿದ್ದು, ಶಾಲೆಗಳನ್ನು ಆರಂಭಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ಆಫ್‌ಲೈನ್‌ ತರಗತಿಗಳು ನಡೆಯಲಿವೆ.

‘ಶಾಲೆಗಳಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಅಣಿಗೊಳಿಸಲಾಗಿದೆ. ಎಲ್ಲ ಶಿಕ್ಷಕರಿಗೂ ಕೋವಿಡ್‌ ಪ್ರತಿರೋಧಕ ಲಸಿಕೆ ಹಾಕಿಸಲಾಗಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ವಿ.ಮಲ್ಲೇಶಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

‘ಕಾಲೇಜು
ಗಳಲ್ಲಿ ಎಲ್ಲ ತಯಾರಿ ಮಾಡಿಕೊಳ್ಳ
ಲಾಗಿದೆ. ಕೋವಿಡ್‌ ಮಾರ್ಗಸೂಚಿ ಪಾಲನೆಗೆ ಸೂಚನೆ ನೀಡಲಾಗಿದೆ’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟನಾಯಕ್‌ ತಿಳಿಸಿದರು. ಕೋವಿಡ್‌ನಿಂದಾಗಿ ಹಲವು ತಿಂಗಳಿನಿಂದ ಶಾಲೆಗಳು ಮುಚ್ಚಿದ್ದವು. ಆನ್‌ಲೈನ್‌ನಲ್ಲಿ ತರಗತಿಗಳು ನಡೆಯುತ್ತಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.